ಕೊಳ್ಳೇಗಾಲ : ಸತ್ತೇಗಾಲ ಗ್ರಾಮಸ್ಥರ ಮನವಿ ಮೇರೆಗೆ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬೈಪಾಸ್ ರಸ್ತೆಯನ್ನು ಸಂಸದ ಸುನಿಲ್ ಬೋಸ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಗ್ರಾಮಸ್ಥರು, ನಮಗೆ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ರಸ್ತೆಯ ಕಳಪೆ ಕೆಲಸವನ್ನು ಸರಿಪಡಿಸಬೇಕು. ೩ ಕಿ.ಮೀ. ವ್ಯಾಪ್ತಿಯಲ್ಲಿ ಟೋಲ್ ಪಡೆಯಬಾರದು ಎಂದು ಕೋರಿದರು.
ಈ ವೇಳೆ ಮಾತನಾಡಿದ ಸಂಸದರು, ಗ್ರಾಮಸ್ಥರ ಬೇಡಿಕೆಯನ್ನು ಆದ್ಯತೆ ಮೇರೆಗೆ ನಿವಾರಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹನೂರಿನ ಮಾಜಿ ಶಾಸಕ ಆರ್.ನರೇಂದ್ರ, ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದವರ್ಮ, ಉಪವಿಭಾಗಾಧಿಕಾರಿ ದಿಲೀಪ್ ಕುಮಾರ್ ಮೀನಾ, ಡಿವೈಎಸ್ಪಿ ಧರ್ಮೇಂದ್ರ, ಮುಖಂಡರಾದ ಪ್ರಭು, ಮುಡಿಗುಂಡ ಶಾಂತರಾಜು, ಇತರರು ಹಾಜರಿದ್ದರು.





