ಚಾಮರಾಜನಗರ

ಸೆರೆ ಹಿಡಿದ ಹುಲಿಗಳನ್ನು ಬಿಆರ್‌ಟಿ ಅರಣ್ಯಕ್ಕೆ ಬಿಡದಂತೆ ಸಂಸದ ಸುನೀಲ್‌ ಬೋಸ್‌ ಸೂಚನೆ

ಮಹಾದೇಶ್‌ ಎಂ ಗೌಡ 

ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು.

ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಬಿಡುತ್ತಿದ್ದಾರೆ ಎಂದು ಆದಿವಾಸಿ ಸಮುದಾಯದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಧ್ಯಮದವರು ಸಂಸದರ ಗಮನಕ್ಕೆ ತಂದು ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ಸಂಸದ ಸುನಿಲ್ ಬೋಸ್ ಅವರು ಸ್ಥಳದಲ್ಲಿಯೇ ಬಿಆರ್‌ಟಿ ಪ್ರಬಾರ ಡಿಸಿಎಫ್ ಭಾಸ್ಕರ್ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ ನಂಜದೇವನಪುರ ಗ್ರಾಮ ವ್ಯಾಪ್ತಿಯಲ್ಲಿ ಸೆರೆಹಿಡೆದಿರುವ ಹುಲಿಗಳನ್ನು ಬಿಆರ್‌ಟಿ ವಲಯದ ದೊಡ್ಡಸಂಪಿಗೆ ಅರಣ್ಯ ಪ್ರದೇಶದಲ್ಲಿ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಬಿಡಕೂಡದು. ಈಗಾಗಲೇ ಕಾಡುಪ್ರಾಣಿಗಳ ಹಾವಳಿಯಿಂದ ಈ ಭಾಗದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಮತ್ತೆ ಬೇರೆಡೆಯಿಂದ ಹುಲಿಗಳನ್ನು ತಂದುಬಿಟ್ಟರೆ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ. ಕಳೆದ ತಿಂಗಳು ಆನೆ ದಾಳಿಯಿಂದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆದಿವಾಸಿ ಸಮುದಾಯದ ಮುಖಂಡರು ಮೃತಪಟ್ಟಿದ್ದಾರೆ. ಈ ಸಂಬಂಧ ಹುಲಿಗಳನ್ನು ಬೇರೆ ಕಡೆ ಬಿಡುವಂತೆ ಸೂಚನೆ ನೀಡಿದರು.

ಇನ್ನು ಚಾಮರಾಜನಗರ ತಾಲ್ಲೂಕಿನ ನಂಜದೇವನಪುರ ಗ್ರಾಮದಲ್ಲಿ 5 ಹುಲಿಗಳು ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಬಗ್ಗೆ ರೈತ ಮುಖಂಡರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಕಾಡು ಪ್ರಾಣಿಗಳ ಹಾವಳಿಗೆ ಯಾವ ಕ್ರಮ ಕೈಗೊಂಡಿದ್ದೀರಾ? 5 ಹುಲಿಗಳ ಪೈಕಿ ಇನ್ನು ಎರಡು ಹುಲಿಗಳನ್ನು ಯಾವಾಗ ಸೆರೆ ಹಿಡಿದು ಗ್ರಾಮಸ್ಥರ ಆತಂಕವನ್ನು ದೂರ ಮಾಡುತ್ತೀರಾ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಫ್‌ ಭಾಸ್ಕರ್ ಈಗಾಗಲೇ ತಾಯಿ ಮತ್ತು ಎರಡು ಮರಿ ಹುಲಿಗಳನ್ನು ಸೆರೆ ಹಿಡಿಯಲಾಗಿದ್ದು, ಕಾರ್ಯಚರಣೆ ಮುಂದುವರಿದಿದೆ. ಅತಿ ಶೀಘ್ರದಲ್ಲಿ ಹುಲಿಗಳನ್ನು ಸೆರೆ ಹಿಡಿದು ರೈತರ ಆತಂಕವನ್ನು ಹೋಗಲಾಡಿಸುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ, ಗೌಡಳ್ಳಿ ರಾಜೇಶ್, ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಸಂಸದರ ಆಪ್ತ ಸಹಾಯಕರಾದ ಜಗದೀಶ್, ಸಂತೋಷ್ ಯುವ ಮುಖಂಡರಾದ ಕೆಂಪರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

2 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

2 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

2 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago