ಹನೂರು: ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು, ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್.ಶಿವಕುಮಾರ್ ತಿಳಿಸಿದರು.
ಈ ಕುರಿತು ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು.
ಇದನ್ನು ಓದಿ: ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ನ್ಯಾಯಾಲಯ
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳ ಜೊತೆ ಸಮಾಲೋಚಿಸಿ ಆದಷ್ಟು ಬೇಗ ನೀರಾವರಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಸಹ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರೈತ ಸಂಘದ ಪದಾಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಳ್ಳದೆ ಗೊಂದಲಕ್ಕೆ ಒಳಗಾಗದೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಮ್ಮ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕಸಭಾ ಸದಸ್ಯರು ಧರಣಿ ಸ್ಥಳಕ್ಕೆ ಬರಲಿಲ್ಲ ಎಂಬ ಒಂದೇ ಒಂದು ಕಾರಣ ಹೇಳಿ ದೂರು ನೀಡಿರುವುದು ಸರಿಯಲ್ಲ. ಅವರು ಸ್ಥಳಕ್ಕೆ ಬಾರದಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುವ ಬದಲು ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಏನು ಯೋಜನೆಗಳನ್ನು ರೂಪಿಸಿದ್ದಾರೆ, ಅಭಿವೃದ್ಧಿಗೆ ಪೂರಕವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದರು.
ರೈತರ ಪರ ಸರ್ಕಾರ : ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾದಂತಹ ಸರ್ಕಾರವಾಗಿದೆ. ರೈತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವಾಗಿದೆ. ಇದೀಗ ಕಲಾಪಗಳು ಆರಂಭವಾಗಿರುವುದರಿಂದ ಕಲಾಪಗಳು ಮುಗಿದ ಬಳಿಕ ನಿಮ್ಮಲ್ಲಿಗೆ ಸಂಸದರು ಆಗುತ್ತಿಲ್ಲ ಮಂತ್ರಿಗಳು ಬಂದು ಸಮಸ್ಯೆಗಳನ್ನು ಕೇಳಲಿದ್ದಾರೆ ಎಂದರು.
ಹಲವಾರು ವರ್ಷಗಳಿಂದ ಮಾಜಿ ಸಚಿವ ದಿ. ರಾಜುಗೌಡ, ಸಂಸದರಾದ ದಿ ಶ್ರೀನಿವಾಸ್ ಪ್ರಸಾದ್, ಆರ್ ಧ್ರುವ ನಾರಾಯಣ ಮಾಜಿ ಶಾಸಕರಾದ ಆರ್ ನರೇಂದ್ರ ರವರು ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವುದರಿಂದ ಅನುದಾನದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ರವರು ಸಭೆ ನಡೆಸಿ 25 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ಡಿಪಿಆರ್ ಸಿದ್ದಪಡಿಸಲು ಸೂಚನೆ ನೀಡಿದ್ದಾರೆ. ಇದಲ್ಲದೆ ಸರ್ವೆ ಕಾರ್ಯವು ಪ್ರಗತಿಯಲ್ಲಿರುವುದರಿಂದ ರೈತ ಮುಖಂಡರುಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…