ಚಾಮರಾಜನಗರ

ಹನೂರು ಕ್ಷೇತ್ರಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಸಂಸದ ಸುನೀಲ್‌ ಬೋಸ್‌ ಸೂಚನೆ: ಮಧುವನಹಳ್ಳಿ ಎಸ್.ಶಿವಕುಮಾರ್‌

ಹನೂರು: ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು, ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್.ಶಿವಕುಮಾರ್ ತಿಳಿಸಿದರು.

ಈ ಕುರಿತು ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು.

ಇದನ್ನು ಓದಿ: ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಹನೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳ ಜೊತೆ ಸಮಾಲೋಚಿಸಿ ಆದಷ್ಟು ಬೇಗ ನೀರಾವರಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಸಹ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರೈತ ಸಂಘದ ಪದಾಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಳ್ಳದೆ ಗೊಂದಲಕ್ಕೆ ಒಳಗಾಗದೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಮ್ಮ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕಸಭಾ ಸದಸ್ಯರು ಧರಣಿ ಸ್ಥಳಕ್ಕೆ ಬರಲಿಲ್ಲ ಎಂಬ ಒಂದೇ ಒಂದು ಕಾರಣ ಹೇಳಿ ದೂರು ನೀಡಿರುವುದು ಸರಿಯಲ್ಲ. ಅವರು ಸ್ಥಳಕ್ಕೆ ಬಾರದಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುವ ಬದಲು ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಏನು ಯೋಜನೆಗಳನ್ನು ರೂಪಿಸಿದ್ದಾರೆ, ಅಭಿವೃದ್ಧಿಗೆ ಪೂರಕವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದರು.

ರೈತರ ಪರ ಸರ್ಕಾರ : ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾದಂತಹ ಸರ್ಕಾರವಾಗಿದೆ. ರೈತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವಾಗಿದೆ. ಇದೀಗ ಕಲಾಪಗಳು ಆರಂಭವಾಗಿರುವುದರಿಂದ ಕಲಾಪಗಳು ಮುಗಿದ ಬಳಿಕ ನಿಮ್ಮಲ್ಲಿಗೆ ಸಂಸದರು ಆಗುತ್ತಿಲ್ಲ ಮಂತ್ರಿಗಳು ಬಂದು ಸಮಸ್ಯೆಗಳನ್ನು ಕೇಳಲಿದ್ದಾರೆ ಎಂದರು.

ಹಲವಾರು ವರ್ಷಗಳಿಂದ ಮಾಜಿ ಸಚಿವ ದಿ. ರಾಜುಗೌಡ, ಸಂಸದರಾದ ದಿ ಶ್ರೀನಿವಾಸ್ ಪ್ರಸಾದ್, ಆರ್ ಧ್ರುವ ನಾರಾಯಣ ಮಾಜಿ ಶಾಸಕರಾದ ಆರ್ ನರೇಂದ್ರ ರವರು ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವುದರಿಂದ ಅನುದಾನದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ರವರು ಸಭೆ ನಡೆಸಿ 25 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ಡಿಪಿಆರ್ ಸಿದ್ದಪಡಿಸಲು ಸೂಚನೆ ನೀಡಿದ್ದಾರೆ. ಇದಲ್ಲದೆ ಸರ್ವೆ ಕಾರ್ಯವು ಪ್ರಗತಿಯಲ್ಲಿರುವುದರಿಂದ ರೈತ ಮುಖಂಡರುಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

8 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

9 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

9 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

9 hours ago