ಚಾಮರಾಜನಗರ

ಯುವಕನ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ ಎಂಬವರ ಪುತ್ರ ನಂದೀಶ್ (27) ಮೃತಪಟ್ಟಯುವಕ. ಮೆಡಿಕಲ್ ರೆಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಶನಿವಾರ ಮೈಸೂರಿನಿಂದ ಆಗ ಮಿಸಿ ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಇಳಿಯುವಾಗ ಸಹ ಪ್ರಯಾಣಿಕರೊಂದಿಗೆ ಗಲಾಟೆಯಾಗಿದೆ. ಈ ವೇಳೆ ಮೂವರು ಹಲ್ಲೆ ನಡೆಸಿದ್ದು, ಅದಾದ ಬಳಿಕ ಕೆಲವರು ನಿಮ್ಮ ಪುತ್ರನ ಮೊಬೈಲ್ ಸಿಕ್ಕಿದೆ ಎಂದು ನಮ್ಮ ಮನೆಗೆ ತಲುಪಿಸಿದ್ದಾರೆ. ಅದಾದ ನಂತರ ಮರುದಿನ ಭಾನುವಾರ ಬೆಳಿಗ್ಗೆ ನನ್ನ ಪುತ್ರನ ಮೊಬೈಲ್‌ಗೆ ಕರೆ ಬಂದಿದ್ದು, ನಿಮ್ಮ ಪುತ್ರನ ಶವ ಬೆಂಗಳೂರಿನ ರೈಲು ಹಳಿಯ ಮೇಲೆ ಸಿಕ್ಕಿದೆ ಎಂದು ತಿಳಿಸಿದರು. ಇದು ಗಲಾಟೆ ಹಿನ್ನೆಲೆಯಲ್ಲಿ ನಡೆದ ಕೊಲೆ ಆಗಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಈ ನಡುವೆ ದೂರು ಕೊಡಲು ತೆರಳಿದ್ದಾಗ ಪೊಲೀಸ ರಿಂದ ಸೂಕ್ತ ಸ್ಪಂದನೆ ದೊರಕಲಿಲ್ಲ. ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನೂರಾರು ಮಂದಿ ಸೋಮವಾರ ಪೊಲೀಸ್ ಠಾಣೆ ಎದುರು ಪ್ರತಿ ಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮೃತನ ತಾಯಿ ದಾಕ್ಷಾಯಿಣಿ ಅವರ ಗೋಳಾಟ ಮನಕಲಕುವಂತಿತ್ತು.

ಪ್ರತಿಭಟನೆಯಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರನಂದೀಶ್, ರೈತ ಮುಖಂಡ ಮಧುವನಹಳ್ಳಿ ಬಸವರಾಜು, ವೀರಶೈವ ಮುಖಂಡ ದೊಡ್ಡಿಂದುವಾಡಿ ವೀರಭದ್ರ, ರೈತ ಮುಖಂಡ ಅಣಗಳ್ಳಿ ಬಸವರಾಜು, ಕರವೇ ಅಧ್ಯಕ್ಷ ಮತೀನ್, ಶಂಕನಪುರ ಜಗದೀಶ್, ಜಾಗತಿಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಿಂದು ಲೋಕೇಶ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಮಧುವಹಳ್ಳಿ ಬಾಲು, ನರೀಪುರ ಮಹೇಶ, ರುದ್ರಸ್ವಾಮಿ, ಮಾಲಂಗಿ ಬಸವರಾಜು, ಇಂದ್ರೇಶ್, ಸುಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ಡಿವೈಎಸ್‌ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಎಎಸ್‌ಪಿ ಉದೇಶ್ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago