ಚಾಮರಾಜನಗರ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಗರದ ಸತ್ತಿ ರಸ್ತೆಯ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಇರುವ ಈದ್ಗಾ ಮೈದಾನ, ಗುಂಡ್ಲುಪೇಟೆ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಎಸ್‌ಡಿಪಿಐ ಮುಖಂಡ ಅಬ್ರಾರ್ ಅಹಮ್ಮದ್ ಅವರು, ದೇಶಾದ್ಯಂತ ಇಂದು ನಾವು ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ನಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದೇವೆ ಎಂದರು.
ಇನ್ನು ಮುಸ್ಲಿಂಮರ ಪವಿತ್ರ ರಂಜಾನ್ ಹಬ್ಬವನ್ನು ಜಿಲ್ಲೆಯಾದ್ಯಂತ ಸಂಭ್ರಮ-ಸಡಗರದೊಂದಿಗೆ ಶ್ರದ್ಧಾ ಭಕ್ತಿಯೊಂದಿಗೆ ಆಚರಣೆ ಮಾಡಲಾಯಿತು.
ಒಂದು ತಿಂಗಳ ಉಪವಾಸದ ಬಳಿಕ ಚಂದ್ರನ ದರ್ಶನ ಪಡೆದ ಮುಸ್ಲಿಂ ಸಮುದಾಯದವರು ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.