Mysore
33
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ: ಸಚಿವ ರಾಮಲಿಂಗಾರೆಡ್ಡಿ

ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಂದಲೂ ಒತ್ತಾಯ ಇದ್ದಿದ್ದರಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಆದರೆ, ರಾಜಮನೆತನದವರು ಕೋರ್ಟ್‌ಗೆ ಹೋಗಿದ್ದು, ಈಗ ಯಥಾಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ನಾನು ಅದರ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ ಎಂದರು.

ಇನ್ನು ಕಾಂಗ್ರೆಸ್‌ ಪ್ರತಿಭಟನೆ ವೇಳೆ ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಒಡೆದು, ದಹನ ಮಾಡಿ ಅವಮಾನ ಮಾಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದನ್ನು ಬಿಜೆಪಿಯವರೇ ಮಾಡಿ ನಮ್ಮ ಮೇಲೆ ಎತ್ತಿ ಹಾಕಿರಬಹುದು. ಆರೋಪ ಮಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ನಮ್ಮವರು ಯಾರೂ ಸಹ ಅವಾಚ್ಯ ಶಬ್ಧಗಳನ್ನು ಬಳಸಿಲ್ಲ ಎಂದು ಕಿಡಿಕಾರಿದರು.

 

Tags:
error: Content is protected !!