ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಂದಲೂ ಒತ್ತಾಯ ಇದ್ದಿದ್ದರಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಆದರೆ, ರಾಜಮನೆತನದವರು ಕೋರ್ಟ್‌ಗೆ ಹೋಗಿದ್ದು, ಈಗ ಯಥಾಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ನಾನು ಅದರ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ ಎಂದರು.
ಇನ್ನು ಕಾಂಗ್ರೆಸ್ ಪ್ರತಿಭಟನೆ ವೇಳೆ ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಒಡೆದು, ದಹನ ಮಾಡಿ ಅವಮಾನ ಮಾಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದನ್ನು ಬಿಜೆಪಿಯವರೇ ಮಾಡಿ ನಮ್ಮ ಮೇಲೆ ಎತ್ತಿ ಹಾಕಿರಬಹುದು. ಆರೋಪ ಮಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ನಮ್ಮವರು ಯಾರೂ ಸಹ ಅವಾಚ್ಯ ಶಬ್ಧಗಳನ್ನು ಬಳಸಿಲ್ಲ ಎಂದು ಕಿಡಿಕಾರಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…