ಚಾಮರಾಜನಗರ: ಮೈಸೂರು ದಸರಾ ಮಹೋತ್ಸವ 2024ರ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ದಸರಾ ಮಹೋತ್ಸವ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ ಎಲ್ಲಾ ಜಿಲ್ಲೆಗಳು ಸ್ಥಾಪಿಸಿದ ಚಿತ್ರಗಳು ಪಾಲ್ಗೊಂಡಿದ್ದವು. ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ಮೆರವಣಿಗೆ ಪ್ರವಾಸಿಗರಿಗೆ ಹಾಗೂ ದಸರಾ ವೀಕ್ಷಣೆ ಮಾಡುತ್ತಿದ್ದ ಜನರಿಗೆ ಬಹಳ ಆಕರ್ಷಣೆಯಾಗಿ ಮೂಡಿ ಬಂದಿದೆ.
ಅದರ ಪೈಕಿ ಚಾಮರಾಜನಗರ ಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ಮೂರನೇ ಸ್ಥಾನ ದೊರಕಿದೆ.
ನಮ್ಮ ಸ್ತಬ್ಧಚಿತ್ರವನ್ನು “ಸೋಲಿಗರ ಸೊಗಡು, ಒಮ್ಮೆ ನೀ ಬಂದು ನೋಡು” ಎಂಬ ಶೀರ್ಷಿಕೆಯಲ್ಲಿ ಪ್ರದರ್ಶಿಸಲಾಗಿತ್ತು.
ಕಲಾವಿದರ ಶ್ರಮ, ನಿಯೋಜಿತ ಅಧಿಕಾರಿಗಳ ಶಿಸ್ತಿನ ಶ್ರಮದಿಂದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಮೂಡಿ ಬಂದಿದೆ, ಚಾಮರಾಜನಗರ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನತೆಯ ಪರವಾಗಿ ದಸರಾ ಉಪ ಸಮಿತಿ ಹಾಗೂ ಪ್ರೋತ್ಸಾಹಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆಗಳು ಎಂದು ಧನ್ಯವಾದ ತಿಳಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…