Mysore
23
broken clouds
Light
Dark

ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ: ಸಚಿವ ಎಚ್.ಸಿ.ಮಹದೇವಪ್ಪ

ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ ತಪ್ಪು ಕೂಡ ಮಾಡಿಲ್ಲ. ಅವರು ಪ್ರಾಮಾಣಿಕ ರಾಜಕಾರಣಿ ಎಂದರು.

ಇನ್ನು ಜೆಡಿಎಸ್‌ ಹಾಗೂ ಬಿಜೆಪಿಯವರು ರಾಜಭವನವನ್ನು ರಾಜಕೀಯ ಅಂಗಳ ಮಾಡಿಕೊಂಡಿದ್ದಾರೆ. ಸಂವಿಧಾನ ಉಲ್ಲಂಘನೆ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯರ ಮೇಲೆ ಕಳಂಕ ತರಲು ಕೋಮುವಾದಿಗಳು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಡಾ ಪ್ರಕರಣದಲ್ಲಿ ಹಣಕಾಸಿನ ಅವ್ಯವಹಾರ ಆಗಿಲ್ಲ. ಸ್ವಜನ ಪಕ್ಷಪಾತ ಆಗಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪಿತೂರಿ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ತಂದು ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೇ ಬಿಜೆಪಿ ಹಾಗೂ ಜೆಡಿಎಸ್‌ನವರು ಪಿತೂರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.