ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ ತಪ್ಪು ಕೂಡ ಮಾಡಿಲ್ಲ. ಅವರು ಪ್ರಾಮಾಣಿಕ ರಾಜಕಾರಣಿ ಎಂದರು.
ಇನ್ನು ಜೆಡಿಎಸ್ ಹಾಗೂ ಬಿಜೆಪಿಯವರು ರಾಜಭವನವನ್ನು ರಾಜಕೀಯ ಅಂಗಳ ಮಾಡಿಕೊಂಡಿದ್ದಾರೆ. ಸಂವಿಧಾನ ಉಲ್ಲಂಘನೆ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯರ ಮೇಲೆ ಕಳಂಕ ತರಲು ಕೋಮುವಾದಿಗಳು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಡಾ ಪ್ರಕರಣದಲ್ಲಿ ಹಣಕಾಸಿನ ಅವ್ಯವಹಾರ ಆಗಿಲ್ಲ. ಸ್ವಜನ ಪಕ್ಷಪಾತ ಆಗಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಿತೂರಿ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ತಂದು ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೇ ಬಿಜೆಪಿ ಹಾಗೂ ಜೆಡಿಎಸ್‌ನವರು ಪಿತೂರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…