Mysore
22
light rain
Light
Dark

ಪ್ರಸಿದ್ಧ ಯಾತ್ರಾಸ್ಥಳ ನಾಗಮಲೆಗೂ ಚಾರಣಿಗರಿಗೆ ನಿಷೇಧ

ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ  ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜನರ ಬದುಕು ಶೋಚನೀಯ ಹಂತಕ್ಕೆ ಬಂದು ತಲುಪಿದೆ.

ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ನಾಗಮಲೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಮಲೆ ಮಹದೇಶ್ವರ ಬೆಟ್ಟ ಕೂಡ ಒಂದು. ಬೆಟ್ಟಕ್ಕೆ ಬರುವ ಭಕ್ತಾದಿಗಳೆಲ್ಲಾ ನಾಗಮಲೆಗೂ ಸಹ ಹೋಗುತ್ತಿದ್ದರು. ಇತ್ತೀಚೆಗೆ ಅರಣ್ಯ ಇಲಾಖೆ ಚಾರಣಕ್ಕೆ ನಿಷೇಧ ಕಾಯ್ದೆ ಜಾರಿಗೆ ತಂದು ಇಲ್ಲಿನ ಚಾರಣಿಗರಿಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಚಾರಣಿಗರಿಗೆ ತೀವ್ರ ನಿರಾಸೆ ಉಂಟಾಗಿದ್ದು, ಅರಣ್ಯ ಇಲಾಖೆ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ನಾಗಮಲೆಗೆ ನಿಷೇಧ ಹೇರಿರುವುದರಿಂದ ಇಲ್ಲಿನ ಜನತೆಗೆ ವ್ಯಾಪಾರ ವಹಿವಾಟು ಇಲ್ಲದೇ ಇತ್ತ ಕೂಲಿಯೂ ಇಲ್ಲದೇ ಕಂಗಾಲಾಗಿದ್ದಾರೆ.

ಅನಾದಿಕಾಲದಿಂದಲೂ ಸಹ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡದೇ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಹೀಗಾಗಿ ಇಲ್ಲಿನ ಜನತೆ ಯಾವುದೇ ಕೆಲಸ ಕಾರ್ಯಗಳಿಲ್ಲದೇ ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನಮಗೆ ಕೆಲಸ ಕೊಡಿ, ಇಲ್ಲವೇ ನಾಗಮಲೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವಂತೆ ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.