ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜನರ ಬದುಕು ಶೋಚನೀಯ ಹಂತಕ್ಕೆ ಬಂದು ತಲುಪಿದೆ.
ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ನಾಗಮಲೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಮಲೆ ಮಹದೇಶ್ವರ ಬೆಟ್ಟ ಕೂಡ ಒಂದು. ಬೆಟ್ಟಕ್ಕೆ ಬರುವ ಭಕ್ತಾದಿಗಳೆಲ್ಲಾ ನಾಗಮಲೆಗೂ ಸಹ ಹೋಗುತ್ತಿದ್ದರು. ಇತ್ತೀಚೆಗೆ ಅರಣ್ಯ ಇಲಾಖೆ ಚಾರಣಕ್ಕೆ ನಿಷೇಧ ಕಾಯ್ದೆ ಜಾರಿಗೆ ತಂದು ಇಲ್ಲಿನ ಚಾರಣಿಗರಿಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಚಾರಣಿಗರಿಗೆ ತೀವ್ರ ನಿರಾಸೆ ಉಂಟಾಗಿದ್ದು, ಅರಣ್ಯ ಇಲಾಖೆ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ನಾಗಮಲೆಗೆ ನಿಷೇಧ ಹೇರಿರುವುದರಿಂದ ಇಲ್ಲಿನ ಜನತೆಗೆ ವ್ಯಾಪಾರ ವಹಿವಾಟು ಇಲ್ಲದೇ ಇತ್ತ ಕೂಲಿಯೂ ಇಲ್ಲದೇ ಕಂಗಾಲಾಗಿದ್ದಾರೆ.
ಅನಾದಿಕಾಲದಿಂದಲೂ ಸಹ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡದೇ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಹೀಗಾಗಿ ಇಲ್ಲಿನ ಜನತೆ ಯಾವುದೇ ಕೆಲಸ ಕಾರ್ಯಗಳಿಲ್ಲದೇ ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನಮಗೆ ಕೆಲಸ ಕೊಡಿ, ಇಲ್ಲವೇ ನಾಗಮಲೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವಂತೆ ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…