ಚಾಮರಾಜನಗರ

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಎಂ.ಎಸ್.ರಶ್ಮಿ ಆದೇಶ ಹೊರಡಿಸಿದ್ದಾರೆ.

ಸುರೇಶ್ ಅವರ ವಿರುದ್ಧ ವಿವಿಧ ಸಂಘಟನೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮ್ಮ ವ್ಯಾಪ್ತಿಯ ಕಚೇರಿಯ ಮೇಲ್ವಿಚಾರಣೆ, ಅಧೀನ ಅಧಿಕಾರಿ/ಸಿಬ್ಬಂದಿಗಳ ಜೊತೆಗೆ ವಿಶ್ವಾಸದಿಂದ ಕರ್ತವ್ಯ ನಿರ್ವಹಿಸದಿರುವುದು, ಕಡತಗಳ ಚಲನಚಲನಕ್ಕೆ ಬಾಹ್ಯಮೂಲ ಸಿಬ್ಬಂದಿಗಳ ಬಳಕೆ, ನಿಯಮಾನುಸಾರ ಕರ್ತವ್ಯ ನಿರ್ಹಿಸದಿರುವುದು, ಸರ್ಕಾರದ ವರ್ಗಾವಣಾ ಆದೇಶ ಪಾಲಿಸದೇ ಇರುವುದು ಇತ್ಯಾದಿ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಅಮಾನತ್ತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago