Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕಳಚಿದ ಚಲಿಸುತ್ತಿದ್ದ ಬಸ್‌ ಚಕ್ರದ ನೆಟ್‌ ಬೋಲ್ಟ್‌: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ  ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ.

ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಗುಣಮಟ್ಟ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದೆ. ಇದಲ್ಲದೆ ಭಾನುವಾರ ಬೆಳಗ್ಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಹಿಂಬದಿಯ ಟೈರ್ ನಟ್ ಬೋಲ್ಟ್ ಏಕಾಏಕಿ ಕಳಚಿದ ಶಬ್ದ ಕೇಳಿ ಬಂದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿ ಮುಂದೆ ಆಗಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಕಾಡಂಚಿನ ಗ್ರಾಮಗಳಿಗೆ ಗುಣಮಟ್ಟದಿಂದ ಕೂಡಿರುವ ಬಸ್ ವ್ಯವಸ್ಥೆ ಕಲ್ಪಿಸಬೇಕು ಇಲ್ಲದಿದ್ದರೆ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡ ಎಸ್ ವೆಂಕಟಾಚಲ ಎಚ್ಚರಿಕೆ ನೀಡಿದ್ದಾರೆ.

Tags: