ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ.
ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಗುಣಮಟ್ಟ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದೆ. ಇದಲ್ಲದೆ ಭಾನುವಾರ ಬೆಳಗ್ಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಹಿಂಬದಿಯ ಟೈರ್ ನಟ್ ಬೋಲ್ಟ್ ಏಕಾಏಕಿ ಕಳಚಿದ ಶಬ್ದ ಕೇಳಿ ಬಂದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿ ಮುಂದೆ ಆಗಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಕಾಡಂಚಿನ ಗ್ರಾಮಗಳಿಗೆ ಗುಣಮಟ್ಟದಿಂದ ಕೂಡಿರುವ ಬಸ್ ವ್ಯವಸ್ಥೆ ಕಲ್ಪಿಸಬೇಕು ಇಲ್ಲದಿದ್ದರೆ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡ ಎಸ್ ವೆಂಕಟಾಚಲ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…