Network issues Villagers struggle to collect ration
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್‌ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿ ಹಾಗೂ ಅಸ್ತೂರು ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿಗಳಿವೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಪಡಿತರದಾರರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುತ್ತಿದ್ದಾರೆ. ಆದರೆ ಪ್ರತಿ ತಿಂಗಳು ಪ್ರತಿಯೊಬ್ಬರು ಬೆರಳಚ್ಚು ಮಾಡಿದ ನಂತರ ಪಡಿತರ ಪಡೆದುಕೊಳ್ಳಬೇಕು. ಆದರೆ ಅಸ್ತೂರು ರಾಮೇಗೌಡನಹಳ್ಳಿಯಲ್ಲಿ ನೆಟ್‌ವರ್ಕ್ ಸಮಸ್ಯೆ ಇರುವುದರಿಂದ ಸಾರ್ವಜನಿಕರು ಪ್ರತಿ ತಿಂಗಳು ನರಕಯಾತನೆ ಅನುಭವಿಸುತ್ತಿದ್ದಾರೆ.
ಅಸ್ತೂರು ಗ್ರಾಮದಲ್ಲಿ 250 ಕ್ಕೂ ಹೆಚ್ಚು ಪಡಿತರ ಕುಟುಂಬಗಳಿವೆ. ಇವರಲ್ಲಿ ಅಂಗವಿಕಲರು, ಗರ್ಭಿಣಿಯರು, ವಯೋ ವೃದ್ಧರು ಕೂಡ ಇದ್ದಾರೆ. ಅಸ್ತೂರು ಗ್ರಾಮದಿಂದ ಎರಡು ಕಿಲೋ ಮೀಟರ್ ದೂರದ ಪೊನ್ನಾಚಿ ಗ್ರಾಮಕ್ಕೆ ನಡೆದುಕೊಂಡು ಬಂದು ಬೆರಳಚ್ಚು ಮಾಡಿಸಬೇಕಿದೆ. ಇದು ಇಲ್ಲಿನ ಸ್ಥಳೀಯರಿಗೆ ಪ್ರತಿ ತಿಂಗಳು ತೊಂದರೆಯಾಗುತ್ತಿದೆ.
ಅಂಗಡಿಯವರು ಬೆರಳಚ್ಚು ಮಾಡುವ ದಿನ ಸರದಿ ಸಾಲಿನಲ್ಲಿ ನಿಂತು ಊಟ, ಕುಡಿಯುವ ನೀರು, ಇಲ್ಲದೆ ಗಂಟೆಗಟ್ಟಲೆ ಕಾದು ನಿಂತು ಬೆರಳಿಡಬೇಕಿದೆ. ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಗರ್ಭಿಣಿಯರು, ವಯೋವೃದ್ದರು ಹಾಗೂ ಮಕ್ಕಳ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಅಧಿಕಾರಿಗಳು ತಿಳಿದುಕೊಳ್ಳಬೇಕು. ಕಾಡಂಚಿನ ಗ್ರಾಮಗಳಾಗಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಕೂಡ ಆಗಾಗ ನಡೆಯುತ್ತಲೇ ಇರುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…