ಚಾಮರಾಜನಗರ

ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ

ಚಾಮರಾಜನಗರ : ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಒಂದು ವಾರದ ಮಗು ಎಂದು ಅಂದಾಜಿಸಲಾಗಿದೆ.

ಸಾಗಡೆ ಗ್ರಾಮದ ಪರಮೇಶ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿ ಮಗುವಿನ ತಲೆ ಕಾಣಿಸಿದೆ. ಆ ವೇಳೆ ಬೈಕ್ ನಿಲ್ಲಿಸಿ ನೋಡಿದಾಗ ಮಗು ಎಂದು ಗೊತ್ತಾಗಿ ತಕ್ಷಣವೇ ಮಗುವನ್ನು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕೊಂಡೊಯ್ದು ಅಲ್ಲಿನ ಅಂಗನವಾಡಿ ಕಾರ್ಯಕರ್ತೆ ನಾಗಮಣಿ, ಆಶಾ ಕಾರ್ಯಕರ್ತೆ ಆಶಾ, ಸಹಾಯಕ ಆರೋಗ್ಯ ಸಿಬ್ಬಂದಿ ಶಿಲ್ಪಾ ಅವರಿಗೆ ಒಪ್ಪಿಸಿದ್ದಾರೆ.

ಈ ವಿಷಯ ತಿಳಿದು ಕೇಂದ್ರದತ್ತ ಗ್ರಾಮದ ಜನರು ಆಗಮಿಸಿ ಜನಸಂದಣಿ ಹೆಚ್ಚಾಯಿತು. ಬಳಿಕ ಮಗುವನ್ನು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಆಂಬ್ಯುಲೆನ್ಸ್ ಮೂಲಕ ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆ ನಾಗಮಣಿ ಮಾಹಿತಿ ನೀಡಿದರು.

ಮಗುವನ್ನು ಜಿಲ್ಲಾಸ್ಪತ್ರೆಯ ಮಕ್ಕಳ ಆರೈಕೆ ಘಟಕದಲ್ಲಿ ಇರಿಸಿ ನಿಗಾ ಇಡಲಾಗಿದೆ. ಪತ್ತೆಯಾಗಿರುವ ಮಗು ಒಂದು ವಾರದ ಮಗುವಾಗಿದ್ದು, ಬೆಳಿಗ್ಗೆ ಸ್ನಾನ ಮಾಡಿಸಿ ನೀಲಿ ಬಣ್ಣದ ಪಂಚೆಯಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಪೋಷಕರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

9 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

9 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

9 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

11 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

13 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

18 hours ago