ಚಾಮರಾಜನಗರ

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.

ಬಂಡೀಪುರ ಬಿಳಿಗಿರಂಗನ ಬೆಟ್ಟ, ಕಬಿನಿ, ನಾಗರಹೊಳೆ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ ಮಾಡಲಾಗಿದೆ ಎಂಬ ದೂರಿನ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು.

ಪರಿಸರ ಸೂಕ್ಷ್ಮ ವಲಯ ಘೋಷಣೆಯಾದ ಬಳಿಕ ರೆಸಾರ್ಟ್ ಹೋಂಸ್ಟೇಗಳ ನಿರ್ಮಾಣಕ್ಕೆ ಅವಕಾಶ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಯಮ ಉಲ್ಲಂಘಿಸಿ ರೆಸಾರ್ಟ್ ನಿರ್ಮಾಣ ಮಾಡಿರುವ ದೂರಿನ ಸಂಬಂಧ ತಾಲ್ಲೂಕು, ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿ, ಕಂದಾಯ, ಪರಿಸರ, ಪ್ರವಾಸೋದ್ಯಮ, ಅಬಕಾರಿ ಇಲಾಖೆಗಳು ಪರಿಶೀಲನೆ ನಡೆಸಬೇಕು. ಅಕ್ರಮ ಎಸಗಿರುವುದು ಕಂಡುಬಂದಲ್ಲಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ, ಅಕ್ರಮ ಕುರಿತು ದಾಖಲೆ ಸಂಗ್ರಹಿಸುವಲ್ಲಿ ಅರಣ್ಯ ಇಲಾಖೆ ಅಽಕಾರಿಗಳು ವಿಫಲವಾಗಿದ್ದು , ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವುಗೊಳಿಸದಿದ್ದರೆ ಫೆ.25ರ ಬಳಿಕ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಬೇಡಗುಳಿ, ಅತ್ತೀಖಾನೆ, ಹೊನ್ನಮೇಟಿಯಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿ ಗುತ್ತಿಗೆ ಅವಧಿ ಮುಗಿದರೂ ಸರ್ಕಾರಕ್ಕೆ ಬಿಟ್ಟುಕೊಟ್ಟಿಲ್ಲ. ಕಾಫಿ ತೋಟಗಳಲ್ಲಿನ ಕಳೆನಾಶಕದಿಂದ ವನ್ಯಜೀವಿ ಹಾಗೂ ಅರಣ್ಯ ಸಂಪತ್ತು ನಾಶವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಒ ಮೋನಾ ರೋತ್, ಮುಖಂಡರಾದ ಮಲೆಯೂರು ಮಹೇಂದ್ರ, ಮುಕ್ಕಡಹಳ್ಳಿ ರಾಜು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago