ಚಾಮರಾಜನಗರ: ಕಾಂಗ್ರೆಸ್ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.
ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ ಕೆಲಸ ಮಾಡಿದ್ದಾರೆ. ಕೇಂದ್ರದಲ್ಲಿ ಈಗ ಪ್ರಬಲವಾಗಿದ್ದೇವೆ ಎಂದರು. ನಾನು ಸ್ಪರ್ಧೆಗೆ ಇಳಿದಾಗ ತುಂಬಾ ಅಪಪ್ರಚಾರ ಕೇಳಿ ಬಂತು. ಆದರೆ, ನಮ್ಮ ಶಾಸಕರು, ಮಾಜಿ ಶಾಸಕರು, ಹಾಗೂ ಮುಖಂಡರು ಅವರೇ ಚುನಾವಣೆಗೆ ನಿಂತಿರುವ ರೀತಿ ಕೆಲಸ ಮಾಡಿದ್ದರು. ಅವರ ಪ್ರತಿಫಲಕ್ಕೆ ಈಗ ತಕ್ಕ ಶ್ರಮ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಐತಿಹಾಸಿಕ ಗೆಲುವು ನನಗೆ ಹೊಸ ಜವಾಬ್ದಾರಿ ಕೊಟ್ಟಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ ಎಂದು ಖುಷಿ ಪಟ್ಟರು.





