ಹನೂರು: ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.22 ರಿಂದ 24ರವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ವಾಸ್ತವ್ಯಕ್ಕೆ ಪ್ರಾಧಿಕಾರದ ಕೊಠಡಿಗಳು ಲಭ್ಯವಿರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 2025ನೇ ಸಾಲಿನ 9ನೇ ಸಚಿವ ಸಂಪುಟ ಸಭೆ ಏಪ್ರಿಲ್.24ರ ಗುರುವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಿಎಂ, ಡಿಸಿಎಂ, ಸಚಿವರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಿರಿಯ ಅಧಿಕಾರಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್.22ರ ಮಂಗಳವಾರದಿಂದ ಏಪ್ರಿಲ್.24ರ ಗುರುವಾರದವರೆಗೆ ಪ್ರಾಧಿಕಾರದ ಕೊಠಡಿಗಳು ಲಭ್ಯವಿರುವುದಿಲ್ಲ. ಮೂರು ದಿನಗಳ ಕಾಲ ಸಾರ್ವಜನಿಕರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಜೊತೆ ಕೈಜೋಡಿಸಿ, ಸಚಿವ ಸಂಪುಟ ಸಭೆಯ ಯಶಸ್ವಿಗೆ ಸಹಕರಿಸಬೇಕು. ಉಳಿದಂತೆ ಏಪ್ರಿಲ್.25ರ ಶುಕ್ರವಾರದಿಂದ ಎಂದಿನಂತೆ ವಾಸ್ತವ್ಯಕ್ಕೆ ಕೊಠಡಿ ಸೌಲಭ್ಯ ಇರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





