ಚಾಮರಾಜನಗರ: ಐದು ವರ್ಷಗಳವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು.
ಈ ಕುರಿತು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಬದಲಾಗೋದು. ಕುರ್ಚಿ ಖಾಲಿ ಆದ ಮೇಲೆ ಆ ಬಗ್ಗೆ ಮಾತನಾಡೋಣ. ಇದರ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಓಟ್ ಗೋಯಿಂಗ್ ಸಿಎಂ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಶೋಕ್‌ಗೆ ಏನು ಕೆಲಸ ಇಲ್ಲ. ಹೋದಲ್ಲಿ, ಬಂದಲ್ಲಿ ಹೇಳೋದೆ ಆಯ್ತು. ಧರ್ಮಸ್ಥಳ ಕೇಸ್‌ನಲ್ಲಿ ಮೆರವಣಿಗೆ ಮಾಡಿದ್ದೇ ಮಾಡಿದ್ದು. ಆಮೇಲೆ ಏನು ಆಯ್ತು. ವೀರೇಂದ್ರ ಹೆಗ್ಗಡೆ ಹೇಳಿದ್ದೇನು. ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು ಒಳ್ಳೆಯದಾಯಿತು ಅಂದರು. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರಬೇಕೆಂಬುದು ನಮ್ಮ ಅಭಿಲಾಷೆ. ಏನೇ ತೀರ್ಮಾನ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.





