ಚಾಮರಾಜನಗರ

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇ.ಇ.ಇಮ್ಯಾನುವೆಲ್ ಸಂತೋಷ್ ಕುಮಾರ್, ಎಇಇ ಸುಧನ್ವ ನಾಗ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಕೊಳವೆಬಾವಿಗಳ ನೀರನ್ನು ಪರಿಶೀಲನೆ ನಡೆಸಿದ್ದಾರೆ. ಇದು ಆಂದೋಲನ ವರದಿಯ ಫಲಶೃತಿ.

ಹನೂರು ತಾಲ್ಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಳಕೆ ಮಾಡುತ್ತಿರುವ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ 30ಕ್ಕೂ ಹೆಚ್ಚು ಜನರು ಕಿಡ್ನಿ ವೈಫಲ್ಯದಿಂದ ನರಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಈ ಸಂಬಂಧ ಆಂದೋಲನ ದಿನಪತ್ರಿಕೆಯಲ್ಲಿ ಫ್ಲೋರೈಡ್ ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ ಎಂಬ ಶೀರ್ಷಿಕೆಯಡಿ ಇಂದು(ಫೆಬ್ರವರಿ.3ರಂದು) ವರದಿ ಪ್ರಕಟಿಸಲಾಗಿತ್ತು.

ವರದಿಯಿಂದ ಎಚ್ಚೆತ್ತ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಎರಡು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿ ಸಾರ್ವಜನಿಕರು ಬಳಸುತ್ತಿರುವ ಕುಡಿಯುವ ನೀರನ್ನು ನಾಲ್ಕು ವಿಧದಲ್ಲಿ ಸ್ಥಳೀಯ ಸಾರ್ವಜನಿಕರ ಸಮ್ಮುಖದಲ್ಲಿಯೇ ಟೆಸ್ಟಿಂಗ್ ಮಾಡಿ ಸಾರ್ವಜನಿಕರಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ.

ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳಲ್ಲಿ ಕುಡಿಯಲು ಬಳಸುತ್ತಿರುವ ನೀರಿನಲ್ಲಿ ಫ್ಲೋರೈಡ್ ಅಂಶ ಕಡಿಮೆ ಇರುವುದರಿಂದ ಇದನ್ನು ಕುಡಿಯಲು ಬಳಸಬಹುದು ಎಂದು ವರದಿ ನೀಡಿದ್ದಾರೆ.

ಇದಲ್ಲದೇ ಮಾರ್ಟಳ್ಳಿ ಕೇಂದ್ರ ಸ್ಥಾನದ ಸ್ಥಳೀಯರು ಬೇರೆ ಕೊಳವೆ ಬಾವಿಗಳಿಂದ ಒಂದು ಚೆಂಬು ಹಾಗೂ ಎರಡು ಪ್ಲಾಸ್ಟಿಕ್ ಬಾಟೆಲ್‌ಗಳಲ್ಲಿ ನೀರು ಸಂಗ್ರಹಿಸಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಮನವಿಯ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಈ ನೀರಿನಲ್ಲಿ ಸಹ ಫ್ಲೋರೈಡ್ ಅಂಶ ಕಡಿಮೆ ಇದ್ದು ಬಳಕೆ ಮಾಡಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರು ಬಳಕೆ ಮಾಡುತ್ತಿರುವುದರಿಂದ ಕಿಡ್ನಿ ಸಮಸ್ಯೆ ಉಂಟಾಗುತ್ತಿದೆ ಎಂಬ ಸ್ಥಳೀಯರ ಅನುಮಾನವನ್ನು ಅಧಿಕಾರಿಗಳು ದೂರ ಮಾಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

1 hour ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

2 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

3 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

8 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

8 hours ago