ಚಾಮರಾಜನಗರ

ಹನೂರು| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ಸಮುದಾಯದವರು ಜಾತ್ರಾ ಮಹೋತ್ಸವ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಪಟ್ಟಣದ ಹಿರಿಯ ಮುಖಂಡ ಲಿಂಗರಾಜುಗೌಡ ಮನವಿ ಮಾಡಿದರು.

ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನ ಜಾತ್ರಾ ಮಹೋತ್ಸವ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಪಟ್ಟಣದಲ್ಲಿರುವ ಪ್ರತಿಯೊಂದು ಸಮುದಾಯದವರು ಹಬ್ಬವನ್ನು ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದೇವೆ. ಅಧಿಕೃತವಾಗಿ ಹಬ್ಬಕ್ಕೆ ಚಾಲನೆ ನೀಡುವ ದಿನದಂದು ಎಲ್ಲಾ ಸಮುದಾಯದ ಮುಖಂಡರನ್ನು ಕರೆದು ಹಬ್ಬಕ್ಕೆ ಚಾಲನೆ ನೀಡುವುದು ವಾಡಿಕೆ. ಅದರಂತೆ ಎಲ್ಲರ ಅಭಿಪ್ರಾಯದಂತೆ ಈ ವರ್ಷ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ನಡೆಸಲು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.

ಆರ್ಯವೈಶ್ಯ ಸಮುದಾಯದ ಮುಖಂಡ ಜಯಪ್ರಕಾಶ್ ಗುಪ್ತ ಮಾತನಾಡಿ, ಹನೂರು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ದೇವಸ್ಥಾನಗಳ ಪೈಕಿ ಪ್ರತಿಯೊಂದು ಸಮುದಾಯದವರು ಒಂದೊಂದು ದೇವಸ್ಥಾನದ ನಿರ್ವಹಣೆ ಮಾಡುತ್ತಿದ್ದಾರೆ. ಅದರಂತೆ ಒಕ್ಕಲಿಗ ಸಮುದಾಯದವರು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಪ್ರತಿ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪ್ರತಿಯೊಬ್ಬ ಸಮುದಾಯದವರು ಪಾಲ್ಗೊಳ್ಳುತ್ತಿದ್ದಾರೆ. ಅದರಂತೆ ಈ ಬಾರಿಯೂ ಜಾತ್ರಾ ಮಹೋತ್ಸವಕ್ಕೆ ನಮ್ಮೆಲ್ಲರ ಸಹಕಾರ ಇರುತ್ತದೆ ಎಂದರು.

ಮೊದಲಿಯಾರ್ ಸಮಾಜದ ಮುಖಂಡ ನಟರಾಜ್ ಮಾತನಾಡಿ, ಹನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ಹಲವಾರು ವರ್ಷಗಳ ಹಿಂದೆ ಒಂದು ಸಮುದಾಯದವರು ಹಬ್ಬಕ್ಕೆ ಚಾಲನೆ ನೀಡಲು ಬಾರದಿದ್ದಾಗ ನಮ್ಮ ತಂದೆಯವರೇ ಹಬ್ಬಕ್ಕೆ ಗ್ರಾಮದಲ್ಲೆಲ್ಲ ಹೋಗಿ ಚಾಲನೆ ನೀಡಿದ್ದರು. ಯಾರೋ ಅವರ ವೈಯಕ್ತಿಕ ಹಿತಾಸಕ್ತಿಗಾಗಿ ಬೇರೆ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದರೆ ಅಲ್ಲಿ ಹೋಗಿ ಜಾತ್ರೆ ಮಾಡಲು ಸಾಧ್ಯವೇ ನಮ್ಮ ಆಚಾರ ವಿಚಾರ ಸಂಸ್ಕೃತಿಯಂತೆ ನಮ್ಮ ಗ್ರಾಮದಲ್ಲಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸೋಣ ಎಂದರು.

ಮಡಿವಾಳ ಸಮುದಾಯದ ಮುಖಂಡ ವಿಜಯ್ ಕುಮಾರ್ ಮಾತನಾಡಿ, ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ನಮ್ಮ ಸಮುದಾಯದವರು ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅದರಂತೆ ಈ ಬಾರಿಯ ಜಾತ್ರಾ ಮಹೋತ್ಸವದಲ್ಲೂ ನಮ್ಮ ಸೇವೆಯನ್ನು ಮುಂದುವರಿಸಿ ಜಾತ್ರೆಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕುರುಬ ಸಮುದಾಯದ ಮುಖಂಡ ಮಲ್ಲು ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ನಮ್ಮ ಸಮುದಾಯದ ವತಿಯಿಂದ ಜಾತ್ರಾ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಉಪ್ಪಾರ ಸಮುದಾಯದ ಮುಖಂಡ ಮುದ್ದುಗಾಮ ಶೆಟ್ಟಿ ಮಾತನಾಡಿ, ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಆರ್ ಎಸ್ ದೊಡ್ಡಿ ಹಾಗೂ ಹಾನೂರು ಪಟ್ಟಣದ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ಅದರಂತೆ ಈ ಬಾರಿಯೂ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡೋಣ ಎಂದು ಸಲಹೆ ನೀಡಿದರು.

ನಂತರ ಎಲ್ಲಾ ಸಮುದಾಯದವರ ಒಮ್ಮತದ ಅಭಿಪ್ರಾಯದಂತೆ ಪಟ್ಟಣದ ರಂಗಸ್ವಾಮಿ ಎನ್ನುವರು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಸಭೆಯಲ್ಲಿ ಕಮ್ಮವಾರು ಸಮುದಾಯದ ಅಧ್ಯಕ್ಷ ದಿನಮಣಿ ನಾಯ್ಡು ಮುಖಂಡರಾದ ರಮೇಶ್ ನಾಯ್ಡು, ಬಾಲರಾಜ್ ನಾಯ್ಡು, ಬಾಲಸುಂದರ, ಆದಿಜಾಂಬವ ಸಮುದಾಯದ ಯಜಮಾನರಾದ ಮಹದೇವ ಸೋಮಣ್ಣ ಪ್ರದೀಪ್ ಸಚಿನ್, ಮುಸ್ಲಿಂ ಸಮುದಾಯದ ಮುನಾವರ್ ಪಾಷ, ಸಮಿವುಲ್ಲಾ, ಆರ್ಯವೈಶ್ಯ ಸಮುದಾಯದ ರಾಜೇಂದ್ರ ಗುಪ್ತ ಗಾಣಿಗ ಸಮುದಾಯದ ಮುಖಂಡ ಮಣಿ ದೇವಾಂಗ ಸಮುದಾಯದ ಮುಖಂಡರಾದ ರಂಗಸ್ವಾಮಿ ರಾಜು ಬಣಜಿಗ ಸಮುದಾಯದ ತಾಲೂಕು ಅಧ್ಯಕ್ಷ ಪ್ರಸನ್ನ ವೀರಶೈವ ಮುಖಂಡರಾದ ನಂಜುಂಡಸ್ವಾಮಿ ವೀರಭದ್ರ ಮಲ್ಲೇಶ್ ಶಿವಲಿಂಗಪ್ಪ ಕುಮಾರ್ ಮರಾಠ ಸಮುದಾಯದ ಬಾಬು ವಿಶ್ವಕರ್ಮ ಸಮುದಾಯದ ತಮ್ಮಯ್ಯ ಚಾರಿ, ಪುಟ್ಟಸ್ವಾಮಿ ನಾಗಾಚಾರಿ ಮುತ್ತುರಾಜು, ಮಡಿವಾಳ ಸಮುದಾಯದ ಮುಖಂಡರಾದ ರಮೇಶ್ ವಿಜಯ್ ಕುಮಾರ್ ಕೃಷ್ಣಮೂರ್ತಿ ಸವಿತಾ ಸಮಾಜದ ಮುಖಂಡ ರಾಜು, ಉಪ್ಪಾರ ಸಮುದಾಯದ ರಂಗಸ್ವಾಮಿ ಕಾಮಶೆಟ್ಟಿ, ಬಸವರಾಜು, ಜೈ ರಾಜು ಮಹದೇವ ಶೆಟ್ಟಿ ಕುರುಬ ಸಮುದಾಯದ ಮುಖಂಡರಾದ ಮಲ್ಲು, ಅನಂತು, ನಾಗಣ್ಣ, ನಾಗೇಶ್, ಪುಟ್ಟಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

4 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

8 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

8 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

8 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

8 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

9 hours ago