ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ.
ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ಘಟನೆ ವಿವರ: ಹೊಸದೊಡ್ಡಿ ಗ್ರಾಮದ ಜಗದೀಶ್ ರೆಡ್ಡಿ ರವರ ಪತ್ನಿ ರುಕ್ಮಿಣಿ ಕೌದಳ್ಳಿ ಗ್ರಾಮಕ್ಕೆ ಹಾಲು ಹಾಕಲು ತೆರಳಿದ್ದಾಗ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಜಗದೀಶ್ ರವರನ್ನು ನೀರು ಕೊಡುವಂತೆ ಕೇಳಿದ್ದಾರೆ. ನೀರು ತರಲು ಒಳಗೆ ಹೋಗುತ್ತಿದ್ದಂತೆ ಇಬ್ಬರು ಅಪರಿಚಿತರು ಅವರ ಕೈಕಾಲು, ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ 168 ಗ್ರಾಂ ಚಿನ್ನ ಹಾಗೂ 41,000 ರೂ. ಹಣ ಕಳವು ಮಾಡಿ ಪರಾರಿಯಾಗಿದ್ದಾರೆ. ಜಗದೀಶ್ ರೆಡ್ಡಿ ರವರ ಅಣ್ಣ ಮನೆಗೆ ಬಂದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಗಳನ್ನು ಧರ್ಮ ರೆಡ್ಡಿ ಎಂಬುವರು ನೋಡಿದ್ದು 30 ರಿಂದ 35 ವರ್ಷ ಒಳಗಿನ ವ್ಯಕ್ತಿಗಳಾಗಿದ್ದು ಜೀನ್ಸ್ ಪ್ಯಾಂಟ್ ಧರಿಸಿ ಟೋಪಿ ಧರಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯ ಪ್ರಭಾರ ಪಿ ಐ ಶಶಿಕುಮಾರ್, ಕಾನೂನು ವಿಭಾಗದ ಈಶ್ವರ್, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಲೋಕೇಶ್, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರಿನಲ್ಲಿ ದರೋಡೆ: ಹನೂರು ಪಟ್ಟಣದ ೧೧ ವಾರ್ಡಿನಲ್ಲಿ ಸೆಪ್ಟೆಂಬರ್ ಹತ್ತರಂದು ಚಿನ್ನ ದೊರೆ, ಧನಲಕ್ಷ್ಮಿ ಎಂಬುವರ ಮನೆಯಲ್ಲಿ 20 ಲಕ್ಷ ನಗದು 308 ಗ್ರಾಂ ಚಿನ್ನ ಕಳ್ಳತನವಾಗಿತ್ತು ಈ ಪ್ರಕರಣವು ಸಹ ಇನ್ನು ತನಿಖಾ ಹಂತದಲ್ಲಿಯೇ ಇದೆ.
ಮಹಿಳೆ ಚಿನ್ನದ ಓಲೆ ದೋಚಿದ್ದ ಅಪರಿಚಿತರು: ಜುಲೈ 31 ರಂದು ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದ ರಾಜಮ್ಮ ಎಂಬುವರು ದೇವನ ಬೀಜಗಳನ್ನು ಸಂಗ್ರಹಣೆ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಜಮೀನು ಸಿಗುತ್ತದೆಯೇ ಎಂದು ಮಾತನಾಡುತ್ತಾ ಏಕಾಏಕಿ ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿಕೊಡುವಂತೆ ಎದುರಿಸಿ ಓಲೆ ದೋಚಿ ಪರಾರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಮೂರು ಪ್ರಕರಣಗಳು ನಡೆದಿದ್ದು, ಎರಡು ಪ್ರಕರಣದಲ್ಲಿ ಚಿನ್ನ ದೋಚಿ, ಇನ್ನೊಂದು ಪ್ರಕರಣದಲ್ಲಿ ಚಿನ್ನ, ನಗದು ದೋಚಿ ಪರಾರಿಯಾಗಿ ರುವ ಘಟನೆಗಳು ತಾಲೂಕು ವ್ಯಾಪ್ತಿಯಲ್ಲಿ ತಲ್ಲಣ ಉಂಟುಮಾಡಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…