ಚಾಮರಾಜನಗರ

ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನ- ಹಣ ಕಳ್ಳತನ

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ.

ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಘಟನೆ ವಿವರ: ಹೊಸದೊಡ್ಡಿ ಗ್ರಾಮದ ಜಗದೀಶ್ ರೆಡ್ಡಿ ರವರ ಪತ್ನಿ ರುಕ್ಮಿಣಿ ಕೌದಳ್ಳಿ ಗ್ರಾಮಕ್ಕೆ ಹಾಲು ಹಾಕಲು ತೆರಳಿದ್ದಾಗ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಜಗದೀಶ್ ರವರನ್ನು ನೀರು ಕೊಡುವಂತೆ ಕೇಳಿದ್ದಾರೆ. ನೀರು ತರಲು ಒಳಗೆ ಹೋಗುತ್ತಿದ್ದಂತೆ ಇಬ್ಬರು ಅಪರಿಚಿತರು ಅವರ ಕೈಕಾಲು, ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ 168 ಗ್ರಾಂ ಚಿನ್ನ ಹಾಗೂ 41,000 ರೂ. ಹಣ ಕಳವು ಮಾಡಿ ಪರಾರಿಯಾಗಿದ್ದಾರೆ. ಜಗದೀಶ್ ರೆಡ್ಡಿ ರವರ ಅಣ್ಣ ಮನೆಗೆ ಬಂದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಗಳನ್ನು ಧರ್ಮ ರೆಡ್ಡಿ ಎಂಬುವರು ನೋಡಿದ್ದು 30 ರಿಂದ 35 ವರ್ಷ ಒಳಗಿನ ವ್ಯಕ್ತಿಗಳಾಗಿದ್ದು ಜೀನ್ಸ್ ಪ್ಯಾಂಟ್ ಧರಿಸಿ ಟೋಪಿ ಧರಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯ ಪ್ರಭಾರ ಪಿ ಐ ಶಶಿಕುಮಾರ್, ಕಾನೂನು ವಿಭಾಗದ ಈಶ್ವರ್, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಲೋಕೇಶ್, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನೂರಿನಲ್ಲಿ ದರೋಡೆ: ಹನೂರು ಪಟ್ಟಣದ ೧೧ ವಾರ್ಡಿನಲ್ಲಿ ಸೆಪ್ಟೆಂಬರ್ ಹತ್ತರಂದು ಚಿನ್ನ ದೊರೆ, ಧನಲಕ್ಷ್ಮಿ ಎಂಬುವರ ಮನೆಯಲ್ಲಿ 20 ಲಕ್ಷ ನಗದು 308 ಗ್ರಾಂ ಚಿನ್ನ ಕಳ್ಳತನವಾಗಿತ್ತು ಈ ಪ್ರಕರಣವು ಸಹ ಇನ್ನು ತನಿಖಾ ಹಂತದಲ್ಲಿಯೇ ಇದೆ.

ಮಹಿಳೆ ಚಿನ್ನದ ಓಲೆ ದೋಚಿದ್ದ ಅಪರಿಚಿತರು: ಜುಲೈ 31 ರಂದು ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದ ರಾಜಮ್ಮ ಎಂಬುವರು ದೇವನ ಬೀಜಗಳನ್ನು ಸಂಗ್ರಹಣೆ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಜಮೀನು ಸಿಗುತ್ತದೆಯೇ ಎಂದು ಮಾತನಾಡುತ್ತಾ ಏಕಾಏಕಿ ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿಕೊಡುವಂತೆ ಎದುರಿಸಿ ಓಲೆ ದೋಚಿ ಪರಾರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಮೂರು ಪ್ರಕರಣಗಳು ನಡೆದಿದ್ದು, ಎರಡು ಪ್ರಕರಣದಲ್ಲಿ ಚಿನ್ನ ದೋಚಿ, ಇನ್ನೊಂದು ಪ್ರಕರಣದಲ್ಲಿ ಚಿನ್ನ, ನಗದು ದೋಚಿ ಪರಾರಿಯಾಗಿ ರುವ ಘಟನೆಗಳು ತಾಲೂಕು ವ್ಯಾಪ್ತಿಯಲ್ಲಿ ತಲ್ಲಣ ಉಂಟುಮಾಡಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago