ಚಾಮರಾಜನಗರ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ನಡೆದಿದೆ.
ಪರಶುರಾಮ್ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಆಲಬಾವಿ ಗ್ರಾಮದವರಾಗಿದ್ದಾರೆ.
ಇಂದು ಬೆಳಿಗ್ಗೆ 11.45ರ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಕಾರಿನಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆಂದು ಸಾಗಿಸುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.






