ಚಾಮರಾಜನಗರ

ನೀರಿನ ಸುಳಿಗೆ ಸಿಲುಕಿ ಓರ್ವ ಸಾವು ; ಹೊಗೇನಕಲ್‌ ಫಾಲ್ಸ್‌ನಲ್ಲಿ ಘಟನೆ

ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಜರುಗಿದೆ.

ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ನಿವಾಸಿ, ಮಡಿಲು ಹೋಟೆಲ್ ಮಾಲೀಕ ಲಿಂಗರಾಜು (42 )ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಘಟನೆಯ ವಿವರ ;
ಗುಂಬಳ್ಳಿ ಗ್ರಾಮದ ನಿವಾಸಿ ಲಿಂಗರಾಜು, ಪತ್ನಿ ಶೃತಿ ಮಕ್ಕಳು ಹಾಗೂ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಹೊಗೇನಕಲ್ ಫಾಲ್ಸ್ ಗೆ ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ನೀರಿನಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ರಭಸಕ್ಕೆ ಲಿಂಗರಾಜು ಸುಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಕುಟುಂಬಸ್ಥರನ್ನು ನುರಿತ ಈಜುಗಾರರು ರಕ್ಷಣೆ ಮಾಡಿದ್ದಾರೆ.

ನೀರಿನ ರಭಸಕ್ಕೆ ಸುಳಿಗೆ ಸಿಲುಕಿ ಲಿಂಗರಾಜುರವರ ಶವ ನೀರಿನಲ್ಲಿ ಮುಳುಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನುರಿತ ಈಜುಗಾರರು ಶವ ಪತ್ತೆಯಲ್ಲಿ ತೊಡಗಿದ್ದಾರೆ. ಭಾನುವಾರ ಸಂಜೆ 7 ಗಂಟೆಯವರೆಗೂ ಶವ ಪತ್ತೆಯಾಗಿಲ್ಲ. ನುರಿತ ಈಜುಗಾರರ ಜೊತೆಗೆ ಅಗ್ನಿಶಾಮಕ ದಳೆದ ಸಿಬ್ಬಂದಿ ವರ್ಗದವರಿಗೂ ಮಾಹಿತಿ ನೀಡಲಾಗಿದ್ದು ಶವ ಪತ್ತೆ ಕಾರ್ಯ ಮುಂದುವರೆದಿದೆ.

ಲಿಂಗರಾಜುರವರು ನೀರಿನ ಸುಳಿಗೆ ಸಿಲುಕಿ ಮುಳುಗುತ್ತಿದ್ದಂತೆ ಪತ್ನಿ ಹಾಗೂ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತು. ಸ್ಥಳೀಯ ನಿವಾಸಿಗಳು ಪತ್ನಿಯನ್ನು ಸಂತೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

22 mins ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

41 mins ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

46 mins ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

1 hour ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

4 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

5 hours ago