ಹನೂರು : ಆನ್‌ಲೈನ್ ಆಪ್‌ನಲ್ಲಿ ೧೦ರಿಂದ ೧೫ ಲಕ್ಷ ರೂ. ಸಾಲ ನೀಡುವುದಾಗಿ ನಂಬಿಸಿ, ಸುಮಾರು ೨.೫೦ ಲಕ್ಷ ರೂ.ಗಳನ್ನು ಆನ್‌ಲೈನ್ ಪೇಮೆಂಟ್ ಮೂಲಕ ಪಡೆದು ವಂಚಿಸಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದಲ್ಲಿ ನಡೆದಿದೆ.
ಕಾಮಗೆರೆ ಗ್ರಾಮದ ರಾಜಪ್ಪ (೩೦) ಮೃತಪಟ್ಟ ಯುವಕ.
ನೇಣು ಬಿಗಿದುಕೊಂಡ ಸ್ಥಿತಿಯಲ್ಲಿದ್ದ ಈತನನ್ನು ಹತ್ತಿರದ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋದ ನಂತರ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪಿಎಸ್‌ಐ ಸುಪ್ರೀತ್‌ರವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನೆಗೆ ಆಧಾರವಾಗಿದ್ದ ಮಗನನನ್ನು ಕಳೆದುಕೊಂಡ ತಾಯಿ, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.





