ಚಾಮರಾಜನಗರ

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಸಾಮೂಹಿಕ ಮನವಿ ಸಲ್ಲಿಸಿದ್ದಾರೆ.

ಸಫಾರಿ ಪರಿಸರ ವಿರೋಧಿ ಎಂದು ಆಕ್ಷೇಪಿಸಿರುವ ರೈತ ಮುಖಂಡರು, “ಸಫಾರಿ ಪುನರಾರಂಭ ಮಾಡಬಾರದು” ಎಂದು ಒತ್ತಾಯಿಸಿ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ತಾಲೂಕಿನ ಹಂಗಳ ಹೋಬಳಿಯ ಕನ್ನೇಗಾಲ, ಹುಂಡೀಪುರ, ಶಿವಪುರ, ಬೊಮ್ಮಲಾಪುರ, ಮಂಗಲ, ಬೇರಂಬಾಡಿ, ತೆರಕಣಾಂಬಿ ಹೋಬಳಿ ವ್ಯಾಪ್ತಿಯ ಕೊಡಸೋಗೆ, ಕೆಲಸೂರು, ಬೊಮ್ಮನಹಳ್ಳಿ, ವಡ್ಡಗೆರೆ, ಶಿಂಡನಪುರ, ಕುಂದಕೆರೆ ಬೇಗೂರು ಹೋಬಳಿಗೆ ಬರುವ ಕೋಟೆಕೆರೆ, ರಾಘವಾಪುರ, ಹೊರೆಯಾಲ, ನಿಟ್ರೆ, ಮಾದಾಪಟ್ಟಣ, ಆಲತ್ತೂರು, ಕಬ್ಬಹಳ್ಳಿ ಹಾಗೂ ಕಸಬಾ ಹೋಬಳಿಯ ಭೀಮನಬೀಡು, ಕೂತನೂರು, ಮಡಹಳ್ಳಿ, ಬರಗಿ, ಮೂಖಹಳ್ಳಿ, ಅಣ್ಣೂರುಕೇರಿ, ವೀರನಪುರ ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಮನವಿ ಸಲ್ಲಿಸಿದ್ದಾರೆ.

ರೈತ ಮುಖಂಡರು ಹೇಳಿದ್ದು…
“ಸಫಾರಿ ವೀಕ್ಷಣೆಗೆ ಹೆಚ್ಚಿನ ಮಂದಿ ಹೊರಗಿನವರು ಬರುತ್ತಾರೆ. ಆದರೆ ಸಫಾರಿಯಿಂದ ರೈತರು ಮತ್ತು ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಕಾಡಿನೊಳಗೆ ಬಸ್‌ ಹಾಗೂ ಜೀಪ್‌ಗಳ ಸಂಚಾರದಿಂದ ವಾಯು ಮಾಲಿನ್ಯವಾಗುತ್ತದೆ. ಸ್ವಚ್ಛಂದವಾಗಿ ಓಡಾಡುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಮನುಷ್ಯನನ್ನು ನೋಡಿ ಪ್ರಾಣಿಗಳು ಗಾಬರಿಗೊಂಡು ಓಡಿಹೋಗುತ್ತವೆ. ಕಾಡು ಕಾಡಾಗೇ ಇರಬೇಕು. ಮಾನವನ ಹಸ್ತಕ್ಷೇಪ ಇರಬಾರದು. ಸಫಾರಿಯಿಂದ ಕಾಡಿನ ಅಸಮತೋಲನವಾಗುತ್ತದೆ.”

ಇನ್ನೂ ಮುಂದುವರಿಸಿ ಮಾತನಾಡಿ, “ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಹಣ ಮಾಡಲು ಅರಣ್ಯದೊಳಗೆ ಅತಿಕ್ರಮಣ ಮಾಡಿ ರೆಸಾರ್ಟ್‌, ಬಾರ್‌ಗಳನ್ನು ಮಾಡಿಕೊಂಡಿದ್ದಾರೆ. ಕಾಡು ಎಲ್ಲರ ಸ್ವತ್ತಾಗಿರುವ ಕಾರಣ ರೈತರ ಅಭಿಪ್ರಾಯ ಪಡೆದುಕೊಳ್ಳಬೇಕು. ಕಾಡನ್ನು ಉಳಿಸುವವರು ರೈತರು ಹಾಗೂ ಗಿರಿಜನರೇ ಹೊರತು, ಯಾವುದೇ ಇಲಾಖೆಯವರಲ್ಲ. ಕಾಡಿನೊಳಗೆ ಇರುವ ಎಲ್ಲಾ ರೆಸಾರ್ಟ್‌, ಹೋಮ್‌ಸ್ಟೇಗಳ ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತಕ್ಷಣ ಸರ್ಕಾರ ವಶಪಡಿಸಿಕೊಳ್ಳಬೇಕು. ಪ್ರವಾಸೋದ್ಯಮಕ್ಕೆ ಬೇರೆ ದಾರಿಗಳಿಗೆ. ಕಾಡಿನೊಳಗೆ ಪ್ರವಾಸೋದ್ಯಮ ಸಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ಸಫಾರಿ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಈ ಮನವಿ ಸಲ್ಲಿಕೆ ವೇಳೆ ಹಾಜರಿದ್ದರು.

ಈ ಸಂಬಂಧ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಪಿಡಿಒಗೆ ವಿಶೇಷವಾಗಿ ಮನವಿ ಸಲ್ಲಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

5 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

6 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

8 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

13 hours ago