ಹನೂರು : ಗ್ರಾಮದ ಮುಖ್ಯ ರಸ್ತೆಯ ಸಮೀಪದಲ್ಲಿರುವ ಮಧ್ಯದ ಅಂಗಡಿಗಳನ್ನ ಸ್ಥಳಾಂತರಗೊಳಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೊಂದ ಕುಟುಂಬದ ಸದಸ್ಯರು ತಮ್ಮ ಮಕ್ಕಳೊಂದಿಗೆ ಪ್ರತಿಭಟನೆ ಮಾಡಿರುವ ಘಟನೆ ಮಾರ್ಟಳ್ಳಿ ಗ್ರಾಮದಲ್ಲಿ ಶನಿವಾರ ಜರುಗಿದೆ.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಮರುದ ಹಾಗೂ ಭುವನ ತನ್ನೆರಡು ಮಕ್ಕಳೊಂದಿಗೆ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ಪ್ರಾರಂಭ ಮಾಡಿ ರಸ್ತೆಯ ಸನಿಹದಲ್ಲಿರುವ ಮಧ್ಯದ ಅಂಗಡಿ ಬಳಿ ಮರುದ ಕುಟುಂಬಸ್ಥರೇ ಏಕಾಂಗಿಯಾಗಿ ಕುಳಿತು ಪ್ರತಿಭಟನೆ ಮಾಡುತ್ತಿದ್ದೂ ಸ್ಥಳಕ್ಕೆ ಅಧಿಕಾರಿಗಳು ಬರುವರೆಗೂ ಸಹ ಪ್ರತಿಭಟನೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
ನಂತರ ಮಾತನಾಡಿದ ಮರುದ ರಸ್ತೆಯ ಸನಿಹದಲ್ಲಿರುವಂತ ಮಧ್ಯದ ಅಂಗಡಿಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ, ಪ್ರಮುಖವಾಗಿ ಇದೇ ರಸ್ತೆಯಲ್ಲಿ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ದಿನನಿತ್ಯ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ರಸ್ತೆಯಲ್ಲಿ ಮದ್ಯದ ಅಂಗಡಿಗಳಿದ್ದು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಮಕ್ಕಳಿಗೆ ಪ್ರೇರೇಪಣೆಯಾಗುತ್ತಿದೆ. ಜೊತೆಗೆ ಸಂಜೆ ವೇಳೆ ಸಂಚಾರ ಮಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಮಧ್ಯದ ಅಂಗಡಿಗಳನ್ನು ಸ್ಥಳಾಂತರ ಗೊಳಿಸಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ಅಧಿಕಾರಿಗಳಿಗೆ ಮನವಿ
ಮಧ್ಯದ ಅಂಗಡಿ ಸ್ಥಳಾಂತರ ಸಂಬಂಧ ಜಿಲ್ಲಾಧಿಕಾರಿ ತಹಸೀಲ್ದಾರ್ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸ್ಥಳಾಂತರ ಮಾಡಬೇಕು ಎಂದು ಲಿಖಿತವಾಗಿ ಮನವಿ ಸಲ್ಲಿಸಿದ್ದರು ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಮುಂದಿನ ದಿನಗಳಲ್ಲಿ ಸಹ ಅಧಿಕಾರಿಗಳು ಕ್ರಮ ವಹಿಸುವರೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.
ಇದೆ ವೇಳೆ ಮರುದ ಹಾಗೂ ಭುವನ ತಮ್ಮ ಎರಡು ಮಕ್ಕಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು…
ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ…
ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ…
ಬಹುರೂಪಿ ಬೆಳ್ಳಿಹಬ್ಬದ ಮಾಹಿತಿ ಸಾರ್ವಜನಿಕರಿಗೆ ತಲುಪಿಸಲು ವಿಫಲ ಮೈಸೂರು : ನಗರದ ರಂಗಾಯಣದ ಬಹುರೂಪಿಗೆ ಈ ಬಾರಿ ಬೆಳ್ಳಿಹಬ್ಬದ ಸಂಭ್ರಮ.…
ಮದ್ದೂರು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ…