ಚಾಮರಾಜನಗರ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ದೊರಕದೆ ಮೃ*ತಪಟ್ಟ ಕುಟುಂಬಗಳಿಗೆ ಸರಕಾರಿ ನೌಕರಿ ನೀಡುವ ಬಗ್ಗೆ ಮಲೆ ಮಹದೇಶ್ವರ ಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗದ ಕಾರಣ ನೊಂದುಕೊಂಡಿರುವ 36 ಸಂತ್ರಸ್ತ ಕುಟುಂಬದವರು, ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ತಲಾ 1 ಲಕ್ಷ ರೂ. ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ.
“ಭಾರತ್ ಜೋಡೋ’ ಯಾತ್ರೆ ವೇಳೆ ಗುಂಡ್ಲುಪೇಟೆ ಯಲ್ಲಿ ಸಂತ್ರಸ್ತ ಕುಟುಂಬದವರನ್ನೆಲ್ಲ ಭೇಟಿ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ 36 ಕುಟುಂಬದ ತಲಾ ಒಬ್ಬರಿಗೆ ಸರಕಾರಿ ನೌಕರಿ ಹಾಗೂ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಸಂತ್ರಸ್ತ ಕುಟುಂಬದವರಿಗೆ ಸರಕಾರಿ ಉದ್ಯೋಗ ನೀಡಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಚರ್ಚಿಸುವುದಾಗಿ ಈ ಹಿಂದೆ ಹೇಳಿದ್ದರು. ಗುರುವಾರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಕ್ಸಿಜನ್ ಸಂತ್ರಸ್ತರ ನೆರವಿಗೆ ಸರಕಾರ ಹೆಚ್ಚಿನ ಪರಿಹಾರ ನೀಡಬಹುದು. ಸರಕಾರಿ ಉದ್ಯೋಗ ನೀಡಲು ವಿಶೇಷ ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸ್ಪಂದನೆ ದೊರೆತಿಲ್ಲ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…