ಚಾಮರಾಜನಗರ

ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣ : ಆರೋಪಿ ಅರಣ್ಯ ಇಲಾಖೆ ಕಸ್ಟಡಿಗೆ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಕುಟುಂಬಸ್ಥರೇ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದ ನಾಲ್ಕನೇ ಆರೋಪಿಗೆ ಹೆಚ್ಚಿನ ವಿಚಾರಣೆಗೆ ಒಂದು ದಿನಗಳ ಕಾಲ (ಶುಕ್ರವಾರ ಸಂಜೆಯವರೆಗೆ) ಅರಣ್ಯ ಇಲಾಖೆ ಕಸ್ಟಡಿಗೆ ನೀಡಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಚ್ಚೆದೊಡ್ಡಿ ಹುಲಿ ಹತ್ಯೆಗೆ ಸಂಬಂಧಪಟ್ಟಂತೆ ಸಿದ್ದು ಎಂಬ ಆರೋಪಿ ಭಾಗಿಯಾಗಿದ್ದು ನಾಪತ್ತೆಯಾಗಿದ್ದ ಈತನ ಕುಟುಂಬಸ್ಥರೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬುಧವಾರ ಒಪ್ಪಿಸಿದ್ದರು. 24 ಗಂಟೆಗಳ ಕಾಲ ಸತತ ವಿಚಾರಣೆ ನಡೆಸಿ ನಂತರ ಹನೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ನೀಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದ ಹಿನ್ನೆಲೆ ನ್ಯಾಯಾಧೀಶರಾದ ಕಾವ್ಯಶ್ರೀರವರು ಒಂದು ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಇದನ್ನೂ ಓದಿ:-2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿಎಂ ಸಿದ್ದರಾಮಯ್ಯ

ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ ,ಸಂಪು ರವರನ್ನು ಬಂಧಿಸಿ ಅಕ್ಟೋಬರ್ ೬ ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗೆ ನೀಡುವಂತೆ ನ್ಯಾಯಾಧೀಶರನ್ನು ಮನವಿ ಮಾಡಿಕೊಂಡಿದ್ದ ಹಿನ್ನೆಲೆ ಐದು ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. ಅಕ್ಟೋಬರ್ 10ರ ಮಧ್ಯಾಹ್ನ 3 ಗಂಟೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆ ಕಳೆದ ಐದು ದಿನಗಳಿಂದ ಹುಲಿ ಸಾವಿಗೆ ಯಾವ ರೀತಿ ಸಂಚು ರೂಪಿಸಿದ್ದಾರೆ, ಯಾರೆಲ್ಲ ಭಾಗಿಯಾಗಿದ್ದಾರೆ, ಯಾವ ರೀತಿ ಹುಲಿಕೊಂದು ಅದನ್ನು ಮೂರು ಪಾಲು ಮಾಡಿದ್ದಾರೆ ಎಂಬುದರ ಬಗ್ಗೆ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರಣೆಯ ವೇಳೆ ಆರೋಪಿಗಳು ಭಾಗಿಯಾಗಿರುವ ಎಲ್ಲರ ಹೆಸರನ್ನು ತಿಳಿಸಿದ್ದು ಹುಲಿಕೊಲ್ಲಲು ನಿಖರ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ವಿಚಾರಣೆ ಮುಗಿದಿರುವುದರಿಂದ ಶುಕ್ರವಾರ ಮಧ್ಯಾಹ್ನ ಕೊಳ್ಳೇಗಾಲ ನ್ಯಾಯಾಲಯದಲ್ಲಿ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಹಸುವಿನ ಮಾಲೀಕ ಚಂದ್ರು ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಈತನ ಬಗ್ಗೆ ಮಾಹಿತಿ ಸಂಗ್ರಹಿಸಿ ಪತ್ತೆ ಹಚ್ಚಿ ಬಂಧಿಸಲು ಕ್ರಮ ಕೈಗೊಂಡಿರುವಾಗಿ ಅರಣ್ಯ ಇಲಾಖೆಯ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

2 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

2 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

2 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

2 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

2 hours ago