ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ.
ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, ಗಣೇಶ, ಸಂಪು ಮೂವರನ್ನು ಬಂಧಿಸಿ ನ್ಯಾಯಲಯದ ಮುಂದೆ ಹಾಜರು ಪಡಿಸಿ ಐದು ದಿನಗಳ ಕಾಲ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ಪಡೆದು ಉಳಿದ ನಾಲ್ವರ ಪತ್ತೆಗೆ ಬಲೆ ಬೀಸಿದ್ದರು.
ಇದನ್ನು ಓದಿ : ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ
ಈ ನಡುವೆ ಸಿದ್ದು ಕುಟುಂಬಸ್ಥರೆ ಆತನನ್ನು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಬಳಿಕ ವಶಕ್ಕೆ ಪಡೆದಂತಹ ಅರಣ್ಯ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಆತನನ್ನು ವಿಚಾರಣೆಯನ್ನು ನಡೆಸುತ್ತಿದ್ದು ಮತ್ತು ಉಳಿದ ಮೂವರ ಬಂಧನಕ್ಕೂ ಕೂಡ ಬಲೆ ಬೀಸಿದ್ದಾರೆ.
ಚಾಲಕನನ್ನು ವಶಕ್ಕೆ ಪಡೆದ ಇಲಾಖೆ : ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಚಾಲಕನಾಗಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ಚಾಲಕ ನಾರಯಣ್ ಹುಲಿ ಹತ್ಯೆ ವಿಷಯ ಗೊತ್ತಿದ್ದರೂ ಮುಚ್ಚಿಟ್ಟು ಆರೋಪಿಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಇಲಾಖೆಗೆ ದ್ರೋಹ ಎಸಗಿದ್ದಾನೆ. ಜೊತೆಗೆ ಹುಲಿ ಸತ್ತ ಬಳಿಕ ಹುಲಿಯನ್ನು ತುಂಡು ತುಂಡು ಮಾಡಿ ಅದರ ಕರುಳು ಹಾಗೂ ಲಿವರ್ ಗಳನ್ನು ತೆಗೆದುಕೊಳ್ಳುವಂತೆ ಈತನೇ ಸಲಹೆ ನೀಡಿದ್ದಾನೆ ಎಂಬ ಆರೋಪದ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದೂ ಇದರ ಅನ್ವಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಆರೋಪಿ ಚಾಲಕ ನಾರಾಯಣ ನನ್ನು ಸಹ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…