ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಖಾಸಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜಾ ದಿನಗಳಲ್ಲಿ ಹಾಗೂ ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತಾದಿಗಳು ನೂರಾರು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಾರೆ.
ಈ ವೇಳೆ ನಿಗದಿತ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸುವ ಬದಲು ಹಣ ಉಳಿತಾಯ ಮಾಡಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಪ್ರತಿನಿತ್ಯ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾದಚಾರಿಗಳಿಗೆ ನಿರಂತರವಾಗಿ ತೊಂದರೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಹಲವಾರು ಬಾರಿ ಸಾಮಾಜಿಕ ಜಾಲತಾಣದ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಲೆ ಮಹದೇಶ್ವರ ಬೆಟ್ಟ ಸುತ್ತಮುತ್ತಲಿನ 18 ಹಳ್ಳಿಗಳ ನಿವಾಸಿಗಳು ಹೆರಿಗೆ, ಅನಾರೋಗ್ಯ, ಅಪಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ಪಡೆಯಲು ಆಗಮಿಸುತ್ತಾರೆ. ಆದರೆ ಖಾಸಗಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ತಮ್ಮ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ಈ ರಸ್ತೆಯ ಮೂಲಕ ಬಸ್ ನಿಲ್ದಾಣ, ನಾಗಮಲೆ ಭವನ ಗಿರಿ ದರ್ಶನಿ, ಪೆಟ್ರೋಲ್ ಬಂಕ್ ಗೆ ತೆರಳಬೇಕಿದೆ.
ಶನಿವಾರ ಆಸ್ಪತ್ರೆಗೆ ತೆರಳಿದ್ದ ರೋಗಿ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಕರೆದೊಯ್ಯುತ್ತಿದ್ದಾಗ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿದ್ದರಿಂದ ಚಾಲಕ ಮುಂದೆ ಹೋಗಲು ಪರದಾಡಬೇಕಾಯಿತು. ಇದರಿಂದ ರೋಗಿಯು ವಾಹನದಲ್ಲಿ ನರಳಾಡುವ ಪರಿಸ್ಥಿತಿ ಉದ್ಭವವಾಗಿತ್ತು.
ಇನ್ನು ಮುಂದಾದರೂ ಸಂಬಂಧಪಟ್ಟ ಪೊಲೀಸ್ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗ ನಿಲ್ಲುವ ವಾಹನ ಸವಾರರಿಗೆ ಕಾನೂನು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯ ನಿವಾಸಿ ಚಿರಂಜೀವಿ ಆಗ್ರಹಿಸಿದ್ದಾರೆ.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…