ಗುಂಡ್ಲುಪೇಟೆ: ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ ನಟ ಸೂರಜ್ಗೆ ಭೀಕರವಾದ ಅಪಘಾತದಲ್ಲಿ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ (ಜೂನ್ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೂರಜ್ ಅವರು ಬೈಕ್ನಲ್ಲಿ ಊಟಿಗೆ ತೆರಳುತ್ತಿದ್ದರು. ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್ಗೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ.
ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವರಾಜ್ಕುಮಾರ್ ಹಾಗೂ ಕುಟುಂಬಸ್ಥರು ಮೈಸೂರಿನ ಆಸ್ಪತ್ರೆಯತ್ತ ತೆರಳಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…