ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದಲೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು
ಪಟ್ಟಣದ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದ ಆವರಣದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲ್ಲೂಕು ಪಂಚಾಯತಿ, ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛತಾ ಹಿ ಸೇವಾ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ 15 ದಿನಗಳ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿಯೊಬ್ಬರು ಈ 15 ದಿನಗಳಿಗೆ ಸೀಮಿತವಾಗದೆ ಪ್ರತಿದಿನವೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ಪಟ್ಟಣದ ಸ್ವಚ್ಛತಾ ಕಾರ್ಯದಲ್ಲಿ ಪೌರ ಕಾರ್ಮಿಕರ ಸೇವೆ ಅಪಾರ, ಅವರ ಶ್ರಮದಿಂದ ಸ್ವಚ್ಛತೆಯನ್ನು ಕಾಣಬಹುದು, ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕ ಸಮಾಜದ ಮಕ್ಕಳು ಸಹ ಉನ್ನತ ವ್ಯಾಸಂಗ ಮಾಡಿ ಬೇರೆ ಕೆಲಸಗಳಿಗೆ ಹೋಗುತ್ತಿರುವುದರಿಂದ ಸ್ವಚ್ಛತಾ ಕೆಲಸಕ್ಕೆ ಬರುವವರು ತುಂಬಾ ಕಡಿಮೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅವರೊಟ್ಟಿಗೆ ನಾವು ಕೈಜೋಡಿಸಿದಾಗ ಮಾತ್ರ ಗಾಂಧಿಜಿಯವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡಬಹುದು ಎಂದು ತಿಳಿಸಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಬಾಲ್ಯದ ಜೀವನದಲ್ಲಿಯೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡುವ ಸೇವಾ ಮನೋಭಾವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ವಾತಾವರಣ ನಿರ್ಮಿಸಿ ಉತ್ತಮ ಅರೋಗ್ಯ ಸಂಪಾದಿಸಿಕೊಳ್ಳೋಣ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನೂರು ಶೈಕ್ಷಣಿಕ ವಲಯದ ಎಲ್ಲಾ ಶಾಲೆಗಳಲ್ಲೂ ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಜಾಗೃತಿ ಮೂಡಿಸಿ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಇ ಒ ಉಮೇಶ್ ಮಾತನಾಡಿ ಸ್ವಚ್ಛತಾ ಹಿ ಸೇವಾ ಪಕ್ಷಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು, ಯುವಕರ ಜಾಥಾ ,ಗಿಡ ನೆಡುವುದು, ಗ್ರಾಮೀಣ ಕ್ರೀಡಾಕೂಟ, ಶೌಚಾಲಯ ಬಳಕೆ ಜಾಗೃತಿ, ತ್ಯಾಜ್ಯ ಮರುಬಳಕೆ, ಬೀದಿಬದಿಯ ಸ್ವಚ್ಛತೆ ಅಭಿಯಾನ ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ರೂಪಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಉದ್ದೇಶವಾಗಿದೆ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಪೌರಕಾರ್ಮಿಕರ ಕೊರತೆ ಇರುವುದರಿಂದ ಸಮರ್ಪಕವಾಗಿ ಕಸ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಪಟ್ಟಣದ ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಅವರಿಗೆ ಸಹಕಾರ ನೀಡಬೇಕು ಮುಂದಿನ ದಿನಗಳಲ್ಲಿ ಹೆಚ್ಚು ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸುಂದರ ಪಟ್ಟಣ ವನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದರು.
ಕಾರ್ಯಕ್ರಮದ ಬಳಿಕ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗಿಡ ನೆಟ್ಟು ನೀರಿರೆದು ಆವರಣ ಸ್ವಚ್ಛಗೊಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮುಮ್ತಾಜ್ ಭಾನು, ಉಪಾಧ್ಯಕ್ಷ ಆನಂದ್ , ಸದಸ್ಯರಾದ ಹರೀಶ್ ಗಿರೀಶ್ ಸುದೇಶ್ ,ಸೋಮಶೇಖರ್, ಸಂಪತ್, ಮಹೇಶ್ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಮುಖ್ಯಾಧಿಕಾರಿ ಅಶೋಕ್ ಆರ್, ಎ.ಡಿ ರವೀಂದ್ರ, ದೈಹಿಕ ಶಿಕ್ಷಣ ಸಂಯೋಜಕ ಮಹಾದೇವ, ಶಿಕ್ಷಣ ಇಲಾಖೆಯ ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…