ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಬಂಡೀಪುರ ಎಸಿಎಫ್ ನವೀನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಚಿತ್ರತಂಡಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಆದರೆ ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಆಗಲಿದೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಿಂದ ಚಿತ್ರತಂಡ ಯಾವುದೇ ಅನುಮತಿ ಪಡೆದಿಲ್ಲ. ಏಪ್ರಿಲ್.8ರಂದೇ ರಾಜ್ಯ ಸರ್ಕಾರದಿಂದ ಅನುಮತಿ ಪಡೆದು ಚಿತ್ರೀಕರಣ ಮಾಡಿದ್ದಾರೆ.
ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಕೇವಲ ಎರಡು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಒಂದು ವೇಳೆ ಚಿತ್ರತಂಡ ನಿಯಮ ಉಲ್ಲಂಘನೆ ಮಾಡಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.





