ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು (35) ಮೃತ ದುರ್ದೈವಿ. ಭಾನುವಾರ (ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ನೀರು ಎಂದು ಭಾವಿಸಿ ಸಿದ್ದರಾಜು ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ.
ಆಸಿಡ್ ಸೇವಿಸಿದ ಬಳಿಕ ಬಿದ್ದು ಒದ್ದಾಡುತ್ತಿದ್ದ ಸಿದ್ದರಾಜುನನ್ನು ಚಿಕಿತ್ಸೆಗಾಗಿ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…