ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಾಮರಾಜನಗರ ಜಿಲ್ಲೆ, ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು ಹಾಗೂ ಜೆ.ಎಸ್. ಎಸ್. ಪದವಿ ಪೂರ್ವ ಕಾಲೇಜು ರಾಮಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡಾ ಸಾಧನೆಗೆ ಮಕ್ಕಳಲ್ಲಿ ಶಿಸ್ತು, ಪರಿಶ್ರಮ ಮುಖ್ಯ, ಕ್ರೀಡೆಯಲ್ಲಿ ಆಸಕ್ತಿ ಇರುವ ಮಕ್ಕಳಲ್ಲಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗುತ್ತಿದೆ. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ಜಿಲ್ಲೆ ಮತ್ತು ತಾಲ್ಲೂಕಿಗೆ ಕೀರ್ತಿ ತರಬೇಕು.
ಹನೂರು ಪಟ್ಟಣದ ಕ್ರೀಡಾಂಗಣಕ್ಕೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಗೊಳಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಹನೂರು ತಾಲ್ಲೂಕಿನಲ್ಲಿ ಇನ್ನಷ್ಟು ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಆಗಲಿದೆ ಎಂದು ತಿಳಿಸಿದರು.
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಪ್ರಸನ್ನ ಮಾತನಾಡಿ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಪೂರಕವಾಗಿ ತೀರ್ಪುಗಾರರು ಸಮಚಿತ್ತದಿಂದ ತೀರ್ಪು ನೀಡುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆಯಬೇಕು. ಶಾಸಕರ ಸಲಹೆಯಂತೆ ಕ್ರೀಡಾಂಗಣದ ಅಭಿವೃದ್ಧಿಗಾಗಿ ಜಿಲ್ಲಾ ಕ್ರೀಡಾ ಅಧಿಕಾರಿಗಳ ಜೊತೆ ಚರ್ಚಿಸಿ ಅಭಿವೃದ್ದಿ ನೀಲನಕ್ಷೆ ತಯಾರಿಸುವಂತೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮುಮ್ತಾಜ್ ಬಾನು, ಉಪಾಧ್ಯಕ್ಷರಾದ ಆನಂದ್ ಕುಮಾರ್, ಪಟ್ಟಣ ಪಂಚಾಯತಿ ಸದಸ್ಯರಾದ ಪವಿತ್ರ, ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಪದವಿ ಪೂರ್ವ ಶಿಕ್ಷಕರ ಸಂಘದ ಅಧ್ಯಕ್ಷ ನರೇಂದ್ರನಾಥ್, ಪ್ರಾಂಶುಪಾಲರಾದ ಮಧುಸೂದನ್, ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ನಾಯ್ಡು, ಸಂಚಾಲಕ ರಾಜೇಂದ್ರ ನಾಯ್ಡು ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…