Mysore
28
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ನೀಡಿ: ಮತ ಯಾಚಿಸಿದ ಸುನೀಲ್‌ ಬೋಸ್‌!

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಚ್‌.ಸಿ ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಸದ್ಯ ಚಾ. ನಗರ ಕಣ ರಂಗೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಇಂದು (ಏ.೬) ಟಿ. ನರಸೀಪುರ ತಾಲೂಕಿನ ಟಿ. ದೊಡ್ಡಪುರ, ಹೆಮ್ಮಿಗೆ, ತಲಕಾಡು ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಮತಯಾಚನೆ ಮಾಡುವ ವೇಳೆ ಮಾಧ್ಯಮಳೊಂದಿಗೆ ಮಾತನಾಡಿದ ಬೋಸ್‌, ಚಾಮರರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲುವ ವಾತಾವರಣವಿದೆ. ನಾನು ರಾಜಕೀಯಕ್ಕೆ ಬಂದಾಗ ಜನರು ಸಾಕಷ್ಟು ಪ್ರೀತಿ ನೀಡಿದ್ದಾರೆ. ಇದೇ ಪ್ರೀತಿ ಇಂದು ನನಗೆ ಲೋಕಸಭಾ ಟಿಕೆಟ್‌ ಕೊಡಿಸಿದೆ ಎಂದರು.

ನನ್ನ ರಾಜಕೀಯ ಪಯಣದಲ್ಲಿ ನೀವು ಯಾವಾಗಲೂ ಸಹಕಾರ ನೀಡಿದ್ದೀರಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸ್ಪಷ್ಟ ಬಹುಮತ ನೀಡಿದ ನನ್ನನ್ನು ಗೆಲ್ಲಿಸುವ ಮೂಲಕ ತಮ್ಮ ಸೇವೆ ಮಾಡಲು ನನಗೊಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

Tags:
error: Content is protected !!