ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಚ್.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸದ್ಯ ಚಾ. ನಗರ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ಇಂದು (ಏ.೬) ಟಿ. ನರಸೀಪುರ ತಾಲೂಕಿನ ಟಿ. ದೊಡ್ಡಪುರ, ಹೆಮ್ಮಿಗೆ, ತಲಕಾಡು ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.
ಮತಯಾಚನೆ ಮಾಡುವ ವೇಳೆ ಮಾಧ್ಯಮಳೊಂದಿಗೆ ಮಾತನಾಡಿದ ಬೋಸ್, ಚಾಮರರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ವಾತಾವರಣವಿದೆ. ನಾನು ರಾಜಕೀಯಕ್ಕೆ ಬಂದಾಗ ಜನರು ಸಾಕಷ್ಟು ಪ್ರೀತಿ ನೀಡಿದ್ದಾರೆ. ಇದೇ ಪ್ರೀತಿ ಇಂದು ನನಗೆ ಲೋಕಸಭಾ ಟಿಕೆಟ್ ಕೊಡಿಸಿದೆ ಎಂದರು.
ನನ್ನ ರಾಜಕೀಯ ಪಯಣದಲ್ಲಿ ನೀವು ಯಾವಾಗಲೂ ಸಹಕಾರ ನೀಡಿದ್ದೀರಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸ್ಪಷ್ಟ ಬಹುಮತ ನೀಡಿದ ನನ್ನನ್ನು ಗೆಲ್ಲಿಸುವ ಮೂಲಕ ತಮ್ಮ ಸೇವೆ ಮಾಡಲು ನನಗೊಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…