ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ರೋಪಿಯನ್ನು ಮಲೆಮಹದೇಶ್ವರ ಬೆಟ್ಟ ಠಾಣಾ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ನವೀನ್ (31) ಹಾಗೂ ರಜನಿ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದಿಂದ ದನದ ಮಾಂಸ ತಂದು ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಕಲ್ಯಾಣ ಮಂಟಪ ಸಮೀಪ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಮ,ಬೆಟ್ಟ ಇನ್ಸ್ಪೆಕ್ಟರ್ ಜಗದೀಶ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಬಸವರಾಜು, ಎಸ್ ಉಪ್ಪಲದಿನ್ನಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ 23 ಕೆಜಿ ದನದ ಮಾಂಸ ಹಾಗೂ ಸಾಗಣೆಗೆ ಬಳಸಿದ್ದ TN-30 AW3245 ಟಿವಿಎಸ್ ಸ್ಪೋರ್ಟ್ಸ್ ಕಂಪನಿಯ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮಾಂಸ ಮಾರಾಟ ಮಾಡುತ್ತಿದ್ದ ನವೀನ ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಮಾಂಸ ನೀಡಿದ್ದ ರಜನಿಯ ಮೇಲೆ ಎಎಸ್‌ಐ ಮಾದಪ್ಪ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿ ನವೀನ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಮುಖ್ಯಪೇದೆಗಳಾದ ಅಸ್ಲಾಂ ಪಾಷ, ರಮೇಶ್ ಕುಮಾರ್, ಮಹೇಶ್, ರಾಕೇಶ್ ಪಾಲ್ಗೊಂಡಿದ್ದರು.