ಚಾಮರಾಜನಗರ

ಹನೂರು ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಸಂಬಂಧ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ

ಹನೂರು: ಹನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಲು ಅನುಮತಿ ಪಡೆದುಕೊಂಡಿರುವವರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ಶಶಿಕುಮಾರ್ ತಿಳಿಸಿದ್ದಾರೆ.

ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ವಿಸರ್ಜನಾ ಸಂಬಂಧ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿರುವವರು, ತಾವು ಅನುಮತಿ ಪಡೆದುಕೊಂಡಿರುವಷ್ಟು ದಿನ ಇಟ್ಟು ಪೂಜೆ ಸಲ್ಲಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ವಿಸರ್ಜನೆ ಮಾಡಬೇಕು. ವಿಸರ್ಜನಾ ಸಂದರ್ಭದಲ್ಲಿ ಡಿಜೆ ಬಳಸುವಂತಿಲ್ಲ. ವಿಸರ್ಜನಾ ಸಮಯದಲ್ಲಿ ಏಕ ಗವಾಕ್ಷಿ ಸಮಿತಿ ನೀಡಿರುವ ಮಾರ್ಗಸೂಚಿಯಂತೆ ವಿಸರ್ಜನೆ ಮಾಡಬೇಕು. ಕೆರೆಕಟ್ಟೆಗಳಲ್ಲಿ ವಿಸರ್ಜನೆ ಮಾಡದೆ ನಿಗದಿತ ಸ್ಥಳಗಳಲ್ಲಿ ವಿಸರ್ಜನೆ ಮಾಡಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವವರು ರಾತ್ರಿ ಹತ್ತು ಗಂಟೆಯ ನಂತರ ಧ್ವನಿವರ್ಧಕ ಬಳಸುವಂತಿಲ್ಲ. ಧ್ವನಿ ವರ್ಧಕ ಬಳಸುವಾಗ ಅಕ್ಕಪಕ್ಕದವರಿಗೆ ತೊಂದರೆ ಆಗದಂತೆ ಕ್ರಮವಹಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಯಾವುದಾದರೂ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದಾದರೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಒಂದೊಮ್ಮೆ ಯಾವುದಾದರು ಅಹಿತಕರ ಘಟನೆಗಳು ನಡೆದರೆ, ಗಣೇಶ ಮೂರ್ತಿ ಪ್ರತಿಷ್ಠಾಪನ ಸಂಬಂಧ ಅನುಮತಿ ಪಡೆದಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಾಥಾ ಕಾರ್ಯಕ್ರಮದಲ್ಲಿ ಸಭೆ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಎಎಸ್ಐ ಕೃಷ್ಣ, ಪುಟ್ಟಸ್ವಾಮಿ ಪೇದೆಗಳಾದ ರಾಘವೇಂದ್ರ, ಕಾಮರಾಜು, ಮೂರ್ತಿ, ಶಿವು, ಪ್ರಭು, ವಿಶ್ವನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.‌

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನೀರಿನ ‘ತಾಪ’ತ್ರಯ ಹನೂರು ಮೊದಲು!

ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ  ಚಾಮರಾಜನಗರ: ಬಿಸಿಲ ತಾಪ…

3 mins ago

‘ಇದು ನನ್ನ ಜಮೀನು, ನಾನಿನ್ನೂ ಬದುಕಿದ್ದೇನೆ’

ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…

10 mins ago

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

16 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago