ಚಾಮರಾಜನಗರ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮಾಲೀಕರನ್ನು ಸಹ ಬಂದಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ನಾಲ್ಕು ಬೈಕ್ ಹಾಗು 4300 ರೂ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ದಾಳಿ ವೇಳೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ನರೇಶ್ ಕುಮಾರ್, ನಟೇಶ್, ಎಎಸ್‌ಐ ಮಹೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

56 mins ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

57 mins ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

1 hour ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

2 hours ago

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

3 hours ago