ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ಪೊಲೀಸ್ ರನ್’ ಶೀರ್ಷಿಕೆಯಡಿ ಇಂದು ಬೆಳಗ್ಗೆ 5 ಕಿ.ಮೀ ಮ್ಯಾರಥಾನ್ ನಡೆಯಿತು.
ಮ್ಯಾರಥಾನ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭವಾಗಿ ರಾಮಸಮುದ್ರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತಲುಪಿ ಅಲ್ಲಿಂದ ಯೂಟರ್ನ್ ಪಡೆದು ಭುವನೇಶ್ವರಿ ವೃತ್ತ ತಲುಪಿ ವಾಪಸ್ ಪೊಲೀಸ್ ಕವಾಯತು ಮೈದಾನದಲ್ಲಿ ಅಂತ್ಯವಾಯಿತು. ಮ್ಯಾರಥಾನ್‌ನಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಡಾ.ಬಿ.ಟಿ.ಕವಿತಾ, ಜಿಲ್ಲಾ ಪಂಚಾಯಿತಿ ಸಿಇಓ ಮೋನಾ ರೋತ್ ಇದ್ದರು.
ಮ್ಯಾರಥಾನ್‌ನಲ್ಲಿ ಮೊದಲು ಬಂದ 50 ಮಂದಿಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪದಕಗಳನ್ನು ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಮನಸ್ಸು ಮತ್ತು ಶರೀರ ಆರೋಗ್ಯವಾಗಿದ್ದರೆ ಮಾತ್ರ ಉತ್ತಮವಾಗಿ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯ. 8 ವರ್ಷ ವಯಸ್ಸಿನಿಂದ 80ರ ವಯಸ್ಸಿನ ತನಕವೂ ಫಿಟ್ ನೆಸ್ ಮತ್ತು ಉತ್ತಮ ಆರೋಗ್ಯ ಇರುವುದು ಅವಶ್ಯಕವಾಗಿದೆ. ಮನೆಯ ಜವಾಬ್ದಾರಿ, ಉದ್ಯೋಗದ ಒತ್ತಡದ ನಡುವೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎಂದು ಆರೋಗ್ಯದ ಬಗ್ಗೆ ಸಲಹೆ ನೀಡಿದರು.




