ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ.
ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಆಕಾಶ್ ಹಾಗೂ ಚಾಲಕ ಪ್ರತಾಪ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಚಿವರಾದ ಕೆ.ವೆಂಕಟೇಶ್ ಅವರು ಸಂಜೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿರುವ ರೇಷ್ಮೆ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ರೇಷ್ಮೆ ಕೃಷಿ ಅಭಿವೃದ್ಧಿ ಹಾಗೂ ವಿಸ್ತರಣೆ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.
ಬಳಿಕ ಸಚಿವರು ವಾಪಸ್ ಆಗುವ ವೇಳೆಯಲ್ಲಿ ಮುಂಭಾಗ ಚಲಿಸುತ್ತಿದ್ದ ಬೆಂಗಾಲು ವಾಹನ ಮಳೆ ಬಿದ್ದಿದ್ದರಿಂದ ತಿರುವಿನಲ್ಲಿ ಪಲ್ಟಿಯಾಯಿತು.
ವಾಹನ ಓಡಿಸುತ್ತಿದ್ದ ಚಾಲಕ ಪ್ರತಾಪ್, ವಾಹನದೊಳಗಿದ್ದ ಸಬ್‌ಇನ್ಸ್‌ಪೆಕ್ಟರ್ ಆಕಾಶ್ ಗಂಭೀರವಾಗಿ ಗಾಯಗೊಂಡರು. ಚಾಲಕ ಪ್ರತಾಪ್ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಆಕಾಶ್ ಅವರಿಗೆ ಯಳಂದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.





