Mysore
22
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಮುಂಭಾಗದಲ್ಲಿ ಮೇಯುತಿದ್ದ ಮೇಕೆ ಚಿರತೆ ದಾಳಿಯಿಂದ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ.

ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆಹೊಲ ಗ್ರಾಮದ ಪ್ರಸನ್ನ ಎಂಬವರು ತಾವು ಸಾಕುತ್ತಿರುವ ಕುರಿಗಳನ್ನು ಗ್ರಾಮದ ಸಮೀಪದ ಸೋದರ ಮಾವನ ಜಮೀನಿನಲ್ಲಿ ಮೇಯಿಸುವಾಗ ಏಕಾಏಕಿ ಚಿರತೆ ದಾಳಿ ನಡೆಸಿದೆ. ಅದೃಷ್ಟ ವಶಾತ್ ಚಿರತೆ ದಾಳಿಯಿಂದ ಪ್ರಸನ್ನ ಪಾರಾಗಿದ್ದಾರೆ. ಅವರ ಕಿರುಚಾಟದಿಂದ ಚಿರತೆ ಗಾಬರಿಗೊಂಡು ಸಮೀಪದಲ್ಲಿಯೇ ಮೇಯುತ್ತಿದ್ದ ಕುರಿಯನ್ನು ಹೊತ್ತೋಯ್ದಿದೆ. ನಂತರ ದಾಳಿಯಿಂದ ಗಾಯಗೊಂಡಿದ್ದ ಮೇಕೆ ಸ್ಥಳದಲ್ಲಿಯೇ ಮೃತಪಟ್ಟಿದೆ.

ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹ
ಕಳೆದ ಹಲವಾರು ತಿಂಗಳಿನಿಂದ ಹೊನ್ನಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಹೆಚ್ಚಾಗಿದೆ. ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ ಮಾಡುವಂತೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಾಡುಪ್ರಾಣಿಗಳ ಹಾವಳಿಯಿಂದ ರೈತರ ಜಮೀನಿನಲ್ಲಿ ಬೆಳೆದ ಫಸಲು ನಾಶವಾಗಿದೆ. ಸಾಕು ಪ್ರಾಣಿಗಳೆಲ್ಲ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾಡುಪ್ರಾಣಿಗಳ ದಾಳಿಯಿಂದ ಮೃತಪಟ್ಟಿರುವ ಕುರಿಗೆ ಸೂಕ್ತ ಪರಿಹಾರ ನೀಡುವಂತೆ ನೊಂದ ರೈತ ಪ್ರಸನ್ನ ಮನವಿ ಮಾಡಿದ್ದಾರೆ.

Tags:
error: Content is protected !!