ಚಾಮರಾಜನಗರ

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ ಅವಕಾಶ ಮಾಡಿಕೊಡುತ್ತಿದ್ದು, ಚಿಕಿತ್ಸೆ ವೆಚ್ಚಕ್ಕಾಗಿ ದಾನಿಗಳ ಮೊರೆ ಹೋಗಿದ್ದಾರೆ. ದಾನಿಗಳು ತಮ್ಮ ಕೈಲಾದ ಸಹಾಯ ಮಾಡುವಂತೆ ತಾಯಿ ಕಮಲಾಕ್ಷಿ ಮನವಿ ಮಾಡಿದ್ದಾರೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ವಾಸವಿರುವ ಕಮಲಾಕ್ಷಿ ಮತ್ತು ನಾಗರಾಜು ಎಂಬ ದಂಪತಿಗೆ ಇರುವ ಏಕೈಕ ಮಗ ಮುತ್ತುಕುಮಾರ್ (35) ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಜೀವನ ದುಸ್ತರವಾಗಿದೆ.

ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗನ ಜೀವ ಉಳಿಸಲು ಪಣತೊಟ್ಟಿರುವ ತಾಯಿ ತನ್ನ ಕಿಡ್ಡಿಯನ್ನ ಮಗನಿಗೆ ಜೋಡಣೆ ಮಾಡಲು ಈಗಾಗಲೇ ಎಲ್ಲಾ ರೀತಿಯ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದು, ಅನುಮತಿ ಸಿಕ್ಕ ಕೂಡಲೇ ಕಿಡ್ನಿ ಜೋಡಣೆ ನಡೆಯಲಿದೆ. ಇದಕ್ಕಾಗಿ ಚಿಕಿತ್ಸಾ ವ್ಯಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೇಲ್ಪಟ್ಟು ಬೇಕಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ. ಹಾಗಾಗಿ ಸಹೃದಯವಂತ ದಾನಿಗಳು ಈ ಕೆಳಕಂಡ ಖಾತೆ ಸಂಖ್ಯೆಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಇದಲ್ಲದೆ ಮುತ್ತುಕುಮಾರ್ ಯುವಕನ ತಂದೆಯು ಸಹ ವಿಕಲ ಚೇತನರಾಗಿದ್ದು ಕುಟುಂಬ ನಿರ್ವಹಣೆ ಬಹಳ ಸಂಕಟದ ಪರಿಸ್ಥಿತಿಯಲ್ಲಿ ಸಿಲುಕಿದೆ. ಹಾಗಾಗಿ ದಾನಿಗಳು ಕಡು ಬಡವರಾದ ನಮಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಖಾತೆ ಸಂಖ್ಯೆ ಮುತ್ತು ಕುಮಾರ್ ಎನ್
A/NO-43880103242
IFSI- SBIN0040078

ಅಥವಾ 9632693564 ಈ ಸಂಖ್ಯೆಗೆ ಫೋನ್ ಪೇ ಮೂಲಕ ಸಹ ಸಹಾಯ ಮಾಡಬಹುದು ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

6 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

11 mins ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

39 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

47 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago