ಚಾಮರಾಜನಗರ

ತಾಯಿ ಮಕ್ಕಳ ಅಸ್ಪತ್ರೆಗೆ ಬೇಬಿ ವಾರ್ಮರ್ ಕೊಡುಗೆ ನೀಡಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು.

ನಂತರ ಮಾತನಾಡಿದ ಅವರು, ತಾಯಿ ಮಕ್ಕಳ ಅನುಕೂಲಕ್ಕಾಗಿಯೇ ನಾವು ಇ ಟ್ರಸ್ಟ್ ಮೂಲಕ ಜನನವಾದ ಮಕ್ಕಳಿಗೆ ಹಾಗೂ ತಾಯಂದಿರಿಗೆ ಅನುಕೂಲವಾಗುವ ಉಪಕರಣಗಳನ್ನು ನೀಡುತ್ತಾ ಬರುತ್ತಿದ್ದೇವೆ. ಗುಂಡ್ಲುಪೇಟೆ ಹಾಗೂ ನಮ್ಮ‌ ಸಂಬಂಧ ಹಳೆಯದು. ಇಲ್ಲಿನ ಸರ್ಕಾರಿ ಅಸ್ಪತ್ರೆಗೆ ಅನುಕೂಲವಾಗಲಿ ಎಂದು ಇವುಗಳನ್ನು ನೀಡುತ್ತಿದ್ದೇವೆ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಶಾಸಕ ಗಣೇಶ್ ಪ್ರಸಾದ್ ಮಾತನಾಗಿ, ರಾಜಮಾತೆಯವರು ನಮ್ಮ ತಾಲ್ಲೂಕನ್ನು ಗುರುತಿಸಿ ಮಕ್ಕಳಿಗೆ ಅನುಕೂಲವಾಗಲಿ ಎಂದು ವಾರ್ಮರ್ ಮಾನಿಟರ್ ನೀಡಿದ್ದಾರೆ. ಇತಿಹಾಸ ಓದಿದಾಗ ರಾಜರು ಒಂದು ಜಾಗಕ್ಕೆ ಸೀಮಿತವಾಗಿಲ್ಲ. ಹಾಗಾಗಿ ಇಂದಿಗೂ ಅವರ ಸೇವಾ ಕಾರ್ಯ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಅವರು ಸಹಕಾರ ನೀಡಲಿದ್ದಾರೆ. ಜೊತೆಗೆ ಮುಖ್ಯವಾಗಿ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಮಾಜಿ ಕಾಡಾ ಅಧ್ಯಕ್ಷ ಎಚ್ ಎಸ್ ನಂಜಪ್ಪ, ಪುರಸಭೆ ಅಧ್ಯಕ್ಷ ಮಧುಸೂದನ್, ತಾಲ್ಲೂಕು ಆರೋಗ್ಯಾಧಿಕಾರಿ ಅಲೀಂ ಪಾಷ, ಅಸ್ಪತ್ರೆ ಆಡಳಿತಾಧಿಕಾರಿ ಡಾ.ಮಂಜುನಾಥ್, ಪುರಸಭೆ ಸದಸ್ಯರು, ವೈದ್ಯರುಗಳು ಸೇರಿದಂತೆ ಹಲವಾರು ಸಾರ್ವಜನಿಕರು ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

4 mins ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

10 mins ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

11 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

11 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

11 hours ago